ಕರ್ನಾಟಕ

karnataka

ETV Bharat / state

ಕೆಂಪೇಗೌಡರ ಪ್ರತಿಮೆ ಜಗತ್ತಿನ ಎತ್ತರದ ಕಂಚಿನ ಪ್ರತಿಮೆ.. ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ನಿಂದ ಪ್ರಮಾಣಪತ್ರ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಟ್ವೀಟ್

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ "ಪ್ರಗತಿಯ ಪ್ರತಿಮೆ"ಯು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅನುಸಾರ ಮೊದಲ ಹಾಗೂ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬುದು ನಮಗೆ ಹೆಮ್ಮೆಯ ವಿಷಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದ್ದಾರೆ.

ಕೆಂಪೇಗೌಡರ ಪ್ರತಿಮೆ
ಕೆಂಪೇಗೌಡರ ಪ್ರತಿಮೆ

By

Published : Nov 9, 2022, 7:30 PM IST

Updated : Nov 9, 2022, 8:27 PM IST

ಬೆಂಗಳೂರು:ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿರುವ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಜಗತ್ತಿನ ಅತಿ ಎತ್ತರದ ಕಂಚಿನ ಪ್ರತಿಮೆ ಎಂದು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾಗಿದೆ.

ಈ ಕುರಿತ ವಿಷಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಟ್ವೀಟ್ ಮೂಲಕ ಹಂಚಿಕೊಂಡಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ "ಪ್ರಗತಿಯ ಪ್ರತಿಮೆ"ಯು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅನುಸಾರ ಮೊದಲ ಹಾಗೂ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬುದು ನಮಗೆ ಹೆಮ್ಮೆಯ ವಿಷಯ.

108 ಅಡಿಯ ಈ ಪ್ರತಿಮೆ ಕೆಂಪೇಗೌಡರ ದೂರದೃಷ್ಟಿಯ ಬೆಂಗಳೂರನ್ನು ಬಿಂಬಿಸುತ್ತದೆ. ಪ್ರಗತಿಯ ಪ್ರತಿಮೆ, ಬನ್ನಿನಾಡ ಕಟ್ಟೋಣ ಎಂದು ಟ್ವೀಟ್ ಮಾಡಿದ್ದಾರೆ.

ಓದಿ:ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ.. ವಿಧಿಬದ್ಧವಾಗಿ ನಡೆದ ಪವಿತ್ರ ಮೃತ್ತಿಕೆ ಸ್ವೀಕಾರ

Last Updated : Nov 9, 2022, 8:27 PM IST

ABOUT THE AUTHOR

...view details