ಕರ್ನಾಟಕ

karnataka

ETV Bharat / state

ಕೆಜಿಎಫ್ 2 ಚಿತ್ರದ ಹಾಡು ಹಕ್ಕುಸ್ವಾಮ್ಯ ಪಡೆಯದೇ ಬಳಕೆ: ರಾಹುಲ್ ಗಾಂಧಿ ಸೇರಿ ಮೂವರ ವಿರುದ್ಧ ಕೇಸ್​ - ಸುಲ್ತಾನ್ ಹಾಡು

ಕೆಜಿಎಫ್ 2 ಹಿಂದಿ ಚಿತ್ರದ ಸುಲ್ತಾನ್ ಹಾಡನ್ನು ಎಂಆರ್‌ಟಿ ಮ್ಯೂಸಿಕ್ ಸಂಸ್ಥೆಯ ಅನುಮತಿ ಪಡೆಯದೇ ಭಾರತ್​ ಜೋಡೋ ಯಾತ್ರೆಯಲ್ಲಿ ಬಳಸಿರುವ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ.

kgf-2-songs-copyright-issue-fir-against-rahul-gandhi-in-bengaluru
ಕೆಜಿಎಫ್ 2 ಚಿತ್ರದ ಹಾಡು ಹಕ್ಕುಸ್ವಾಮ್ಯ ಪಡೆಯದೇ ಬಳಕೆ: ರಾಹುಲ್ ಗಾಂಧಿ ಸೇರಿ ಮೂವರ ವಿರುದ್ಧ ಕೇಸ್​

By

Published : Nov 4, 2022, 10:49 PM IST

ಬೆಂಗಳೂರು:ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್ 2 ಚಿತ್ರದ ಹಾಡು ಹಕ್ಕುಸ್ವಾಮ್ಯ ಪಡೆಯದೇ ದುರ್ಬಳಕೆ ಮಾಡಿರುವ ಆರೋಪದಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿ ಮೂವರ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಎಂಆರ್‌ಟಿ ಮ್ಯೂಸಿಕ್ ಕೆಜಿಎಫ್ 2 ಹಿಂದಿ ಚಿತ್ರಗೀತೆಗಳ ಹಕ್ಕುಸ್ವಾಮ್ಯ ಹೊಂದಿದೆ. ಆದರೆ, ಎಂಆರ್‌ಟಿ ಮ್ಯೂಸಿಕ್‌ನಿಂದ ಹಕ್ಕುಸ್ವಾಮ್ಯ ಪಡೆಯದೇ ಭಾರತ್​ ಜೋಡೊ ಯಾತ್ರೆಯಲ್ಲಿ ಕೆಜಿಎಫ್ 2 ಹಿಂದಿ ಚಿತ್ರದ ಗೀತೆ ಸುಲ್ತಾನ್ ಹಾಡನ್ನು ಬಳಸಲಾಗಿತ್ತು. ಆದ್ದರಿಂದ ರಾಹುಲ್ ಗಾಂಧಿ, ಸಂಸದ ಜಯರಾಮ್ ರಮೇಶ್, ಪಕ್ಷದ ವಕ್ತಾರೆ ಸುಪ್ರಿಯಾ ಶ್ರೀನಾಥೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕೆಜಿಎಫ್ 2 ಹಿಂದಿ ಚಿತ್ರಗೀತೆಯ ವಿಡಿಯೋಗಳನ್ನು ಕಾಂಗ್ರೆಸ್ ಪಕ್ಷದ ಅಧಿಕೃತ ಫೇಸ್‌ಬುಕ್, ಟ್ವೀಟರ್, ಯೂಟ್ಯೂಬ್ ಖಾತೆ ಹಾಗೂ ಯಾತ್ರೆಯಲ್ಲೂ ಬಳಸಲಾಗಿತ್ತು. ಹೀಗಾಗಿ ಸಂಸ್ಥೆಯ ಅನುಮತಿ ಪಡೆಯದೇ ಹಾಡು ಬಳಸಿರುವ ಹಿನ್ನೆಲೆಯಲ್ಲಿ ಎಂಆರ್‌ಟಿ ಸಂಸ್ಥೆಯ ನವೀನ್‌ಕುಮಾರ್ ಎಂಬುವವರು ಯಶವಂತಪುರ ಪೊಲೀಸ್ ಠಾಣೆಗೆ ನೀಡಿದ್ದಾರೆ. ಕಾಪಿರೈಟ್ ಉಲ್ಲಂಘಿಸಿದ ಆರೋಪದಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಸಿಎಂ ಗೃಹ ಕಚೇರಿ ಮುಂದೆ ಪ್ರತಿಭಟನೆ: ಕೆಪಿಸಿಸಿ ಮಹಿಳಾ ಅಧ್ಯಕ್ಷೆಗೆ ಜಾಮೀನು ರಹಿತ ವಾರಂಟ್​ ಜಾರಿ...

ABOUT THE AUTHOR

...view details