ಬೆಂಗಳೂರು: ಕೆಜಿಎಫ್ ಮೂಲಕ ದಕ್ಷಿಣ ಸಿನಿಮಾ ಇಂಡಸ್ಟ್ರಿಯ ಗಮನ ಸೆಳೆದವರು ನಟ ಯಶ್. ಅವರು ಎಲ್ಲಿಗೆ ಹೋದ್ರೂ ಅಭಿಮಾನಿಗಳು ಆ ಒಂದು ಪ್ರಶ್ನೆಯನ್ನು ಕೇಳುವುದು ಸಾಮಾನ್ಯವಾಗಿತ್ತು. ಅದು ಕೆಜಿಎಫ್ ಚಾಪ್ಟರ್-2 ಸಿನಿಮಾ ರಿಲೀಸ್ ಡೇಟ್ ಬಗ್ಗೆ. ಆದ್ರೀಗ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಚಿತ್ರತಂಡ ಫಿಲಂ ರಿಲೀಸ್ ಡೇಟ್ ಫಿಕ್ಸ್ ಮಾಡಿದೆ.
ಅಕ್ಟೋಬರ್ 23 ರಂದು ಕೆಜಿಎಫ್ ಚಾಪ್ಟರ್ 2 ಸಿನಿಮಾ ಜಗತ್ತಿನ ನಾನಾ ಚಿತ್ರ ಮಂದಿರಗಳಲ್ಲಿ ತೆರೆ ಕಾಣಲಿದೆ.