ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಯ ದೃಶ್ಯಕ್ಕೆ ಕೆಜಿಎಫ್​ ಸಿನಿಮಾ ಹಾಡು ಬಳಕೆ​​: ರಾಹುಲ್ ಗಾಂಧಿ ವಿರುದ್ಧದ ತನಿಖೆಗಿದ್ದ ತಡೆಯಾಜ್ಞೆ ವಿಸ್ತರಣೆ - ಕಾಂಗ್ರೆಸ್ ನಾಯಕರ ವಿರುದ್ಧ ತನಿಖೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವರ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಗೆ ಈ ಹಿಂದೆ ಕೋರ್ಟ್ ತಡೆಯಾಜ್ಞೆ ನೀಡಿತ್ತು.

Bharat Jodo Yatra case
ಭಾರತ್ ಜೋಡೋ ಯಾತ್ರೆ ಪ್ರಕರಣ

By

Published : Jun 16, 2023, 3:18 PM IST

ಬೆಂಗಳೂರು: ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್ 2 ಚಿತ್ರದ ಹಾಡು ಬಳಕೆ ಮಾಡಿಕೊಂಡು ಹಕ್ಕುಸ್ವಾಮ್ಯ ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪದಲ್ಲಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಸೇರಿದಂತೆ ಮತ್ತಿತರರ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಗೆ ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಒಂದು ವಾರ ವಿಸ್ತರಿಸಿದೆ.

ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಲು ಕೋರಿ ಭಾರತೀಯ ಕಾಂಗ್ರೆಸ್ ಪಕ್ಷದ ಸಂವಹನಾ ಮತ್ತು ಪ್ರಚಾರ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಸಾಮಾಜಿಕ ಜಾಲತಾಣಗಳ ವಿಭಾಗದ ಮುಖ್ಯಸ್ಥರಾದ ಸುಪ್ರಿಯಾ ಶ್ರೀನಾಟೆ ಮತ್ತು ರಾಹುಲ್ ಗಾಂಧಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ಒಂದು ವಾರ ಕಾಲ ವಿಸ್ತರಿಸಿ ವಿಚಾರಣೆಯನ್ನು ಮುಂದೂಡಿದೆ. ಅಲ್ಲದೇ, ಮತ್ತೆ ಮುಂದೂಡುವುದಿಲ್ಲ ಎಂದು ಪೀಠ ಮೌಖಿಕವಾಗಿ ತಿಳಿಸಿತು.

ವಿಚಾರಣೆ ವೇಳೆ ದೂರುದಾರರ ಎಂಆರ್‌ಟಿ ಮ್ಯೂಸಿಕ್ ಪರ ವಾದ ಮಂಡಿಸಿದ ವಕೀಲರು, ಈ ಹಿಂದೆ ಇದೇ ಆರೋಪ ಸಂಬಂಧ ಕಾಂಗ್ರೆಸ್ ಪಕ್ಷ ಮತ್ತು ಭಾರತ್ ಜೋಡೋ ಸಂಬಂಧಿತ ಟ್ವಿಟರ್ ಖಾತೆಗಳ ಮೇಲೆ ನಿರ್ಬಂಧ ವಿಧಿಸುವಂತೆ ಸೂಚನೆ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ವೇಳೆ, ಅರ್ಜಿದಾರರ ಪರ ವಕೀಲರು, ಹೌದು ನಾವು ಕೆಜಿಎಫ್ 2 ಸಂಗೀತವನ್ನು ತಪ್ಪಾಗಿ ಬಳಸಿಕೊಂಡಿದ್ದೇವೆ. ಅದನ್ನು ತೆಗೆದು ಹಾಕಲಾಗುವುದು ಎಂದು ಭರವಸೆ ನಿಡಿದ್ದರು. ಆದರೆ, ಇಂದಿಗೂ ಅದನ್ನು ಮಾರ್ಪಡಿಸಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಅರ್ಜಿದಾರರು ದೂರುದಾರರಿಗೆ ಪರಿಹಾರ ನೀಡಬೇಕಾಗುತ್ತದೆ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದ್ದರು. ಈ ವೇಳೆ ಮಧ್ಯಪ್ರವೇಶಿಸಿದ ಅರ್ಜಿದಾರರ ಪರ ವಕೀಲರು, ಒಂದು ವಾರ ಕಾಲಾವಕಾಶ ನೀಡುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು. ಈ ಮನವಿ ಪರಿಗಣಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.

ಇದನ್ನೂ ಓದಿ:Pranitha Subhash: 'ಪೊರ್ಕಿ' ಹುಡುಗಿಯ ಅದ್ಭುತ ಸಾಂಪ್ರದಾಯಿಕ ನೋಟ

ಪ್ರಕರಣ ಸಂಬಂಧ ಈ ಹಿಂದೆ ವಿಚಾರಣೆ ನಡೆಸಿದ್ದ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರು, ಸಂಗೀತ ಬಳಕೆ ಆರೋಪದಲ್ಲಿ ಈ ಹಿಂದೆ ನ್ಯಾಯಾಲಯಕ್ಕೆ ನೀಡಿದ ಭರವಸೆಯಂತೆ ಹಾಡಿನ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕಲಾಗಿದೆ. ಜೊತೆಗೆ, ಕೆಜಿಎಫ್ ಚಿತ್ರದ ದೃಶ್ಯಗಳನ್ನು ಬಳಕೆ ಮಾಡಿಕೊಂಡಿಲ್ಲ. ಯಾತ್ರೆಯ ದೃಶ್ಯಗಳಿಗೆ ಹಿನ್ನೆಲೆ ಸಂಗೀತ ಬಳಕೆ ಮಾಡಿಕೊಳ್ಳಲಾಗಿತ್ತು. ಪ್ರಸ್ತುತ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಯಾವುದೇ ಕಾಗ್ನಿಜಬಲ್ ಆರೋಪಗಳಿಲ್ಲ. ಆದರೆ, ವಿಡಿಯೋದಲ್ಲಿ ರಾಹುಲ್ ಗಾಂಧಿ ಅವರ ಮುಖ ಕಾಣುತ್ತದೆ ಎಂಬ ಕಾರಣಕ್ಕಾಗಿ ಅವರನ್ನು ಆರೋಪಿಯನ್ನಾಗಿಸಲಾಗಿದೆ. ಬೆಂಗಳೂರಿನಲ್ಲಿ ಯಾತ್ರೆ ನಡೆಯದಿದ್ದರೂ, ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಹಕ್ಕ ಸ್ವಾಮ್ಯ ಉಲ್ಲಂಘನೆ ಆರೋಪವಿದ್ದರೂ, ಉದ್ದೇಶಪೂರ್ವಕವಾಗಿ ಐಪಿಸಿ ಸೆಕ್ಷನ್ 120ಬಿ (ಕ್ರಿಮಿನಲ್ ಪಿತೂರಿ), 402 (ಆಸ್ತಿಯ ಅಪ್ರಾಮಾಣಿಕ ದುರುಪಯೋಗ) ಮತ್ತು 425 (ನಕಲಿ) ಕಾಯ್ದೆ ಮತ್ತು ಮಾಹಿತಿ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ವಾದಿಸಿದರು.

ಇದನ್ನೂ ಓದಿ:'ಸೀತೆ ಭಾರತದ ಮಗಳು' ಡೈಲಾಗ್​ ಕಟ್: ಮೊದಲ ದಿನ 80 ಕೋಟಿ ಬಾಚಲಿರುವ ಆದಿಪುರುಷ್​

ದೂರದಾರರಾದ ಎಂಆರ್‌ಟಿ ಮ್ಯೂಸಿಕ್ ಪರ ವಕೀಲರು, ನ್ಯಾಯಾಲಯದ ಆದೇಶದ ನಡುವೆಯೂ ಸಂಗೀತ ಬಳಕೆ ಮಾಡಿಕೊಂಡಿರುವ ತುಣುಕುಗಳನ್ನು ಅರ್ಜಿದಾರರ ಸಾಮಾಜಿಕ ಜಾಲಾತಾಣಗಳಲ್ಲಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿದೆ. ಆ ರ‍್ಯಾಲಿಯಲ್ಲಿ ತಮ್ಮನ್ನು ವೈಭವೀಕರಿಸಿಕೊಳ್ಳಲು ದೂರುದಾರರು ಹಾಡುಗಳನ್ನು ಬಳಕೆ ಮಾಡಿಕೊಂಡಿರಬಹುದು. ಆದರೆ, ಆ ಹಾಡನ್ನು ಬಳಸುವುದಕ್ಕೆ ಹಕ್ಕು ಸ್ವಾಮ್ಯ ಪಡೆದಿರುವವರಿಗೆ ಮಾತ್ರ ಅವಕಾಶವಿದೆ. ಇದು ಕೃತಿಸ್ವಾಮ್ಯ ಉಲ್ಲಂಘನೆ ಮಾಡಿದಂತೆ. ಕ್ರಿಮಿನಲ್ ಆರೋಪಗಳ ಕುರಿತು ಅಂಶಗಳು ತನಿಖೆಯಲ್ಲಿ ಹೊರ ಬರಲಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ವಾದ- ಪ್ರತಿವಾದ ಆಲಿಸಿದ ನ್ಯಾಯಪೀಠ, ತನಿಖೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿತ್ತು.

ABOUT THE AUTHOR

...view details