ಬೆಂಗಳೂರು: ಮಧ್ಯಪ್ರದೇಶ ಶಾಸಕರ ನಡೆ ಬಗ್ಗೆ ಮಾಜಿ ಸಚಿವ ಯು.ಟಿ.ಖಾದರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅಸಮಾಧಾನ ಹೊರಹಾಕಿದ್ದಾರೆ.
ಆಪರೇಷನ್ ಕಮಲದ ಮೂಲಕ ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ರಾಜ್ಯ ಕೈ ನಾಯಕರ ಆಕ್ರೋಶ - ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ
ಮಧ್ಯಪ್ರದೇಶ ಶಾಸಕರ ನಡೆ ಬಗ್ಗೆ ಮಾಜಿ ಸಚಿವ ಯು.ಟಿ.ಖಾದರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅಸಮಾಧಾನ ಹೊರಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ಬಿಜೆಪಿ ಹಾಡಹಗಲೇ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡ್ತಿದೆ. ಸಂವಿಧಾನವನ್ನ ಎತ್ತಿ ಹಿಡಿಯುತ್ತೇವೆ ಅನ್ನೋ ಇವರೇ ಶಾಸಕರನ್ನ ಹೈಜಾಕ್ ಮಾಡುತ್ತಿದ್ದಾರೆ. ಅಲ್ಲದೇ ಜನರಿಂದ ಆರಿಸಿ ಬಂದವರನ್ನ ಆಪರೇಷನ್ ಬಲೆಗೆ ಬೀಳಿಸಿಕೊಳ್ಳುತ್ತಿದ್ದಾರೆಂದು ಕಿಡಿಕಾರಿದರು. ಅಲ್ಲದೇ ನಾವೀಗಾಗಲೇ ಹೈಕಮಾಂಡ್ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಎಲ್ಲಾ ಶಾಸಕರನ್ನು ಸಂಪರ್ಕಿಸೋ ಪ್ರಯತ್ನ ಮಾಡ್ತೇವೆ ಎಂದರು.
ಮಾಜಿ ಸಚಿವ ಯು.ಟಿ.ಖಾದರ್ ಈ ಬಗ್ಗೆ ಪ್ರತಿಕ್ರಿಯಿಸಿ, ವಿಧಾನಸಭೆ ಅಧಿವೇಶನದಲ್ಲಿ ನಾವು ಸಂವಿಧಾನದ ಮೇಲೆ ಚರ್ಚೆ ಮಾಡುತ್ತಿದ್ದೇವೆ. ಆದರೆ ಇನ್ನೊಂದೆಡೆ ಬಿಜೆಪಿ ಸಂವಿಧಾನದ ಕಗ್ಗೊಲೆ ಮಾಡುವ ಕಾರ್ಯ ಮಾಡುತ್ತಿದೆ. ಆಡಳಿತ ಪಕ್ಷ ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದು, ಮಧ್ಯಪ್ರದೇಶದ ಶಾಸಕರನ್ನು ಇಲ್ಲಿಗೆ ಕರೆಸಿ ಆಶ್ರಯ ನೀಡುತ್ತಿದೆ. ಇದನ್ನು ನಾವು ಖಂಡಿಸುತ್ತೇವೆ ಎಂದರು.