ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ. ಒಟ್ಟು ಮೂರು ಹುದ್ದೆಗಳು ಖಾಲಿ ಇದ್ದು, ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು. ಸೂಕ್ತ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ: ಮೂರು ವಾಹಕನ ಚಾಲಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ: ಅಭ್ಯರ್ಥಿಗಳು 7ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇತ್ತೀಚಿನ ವಾಹನ ಚಾಲನಾ ಪರವಾನಗಿ ಹೊಂದಿರಬೇಕು. ಮೋಟಾರು ಕಾರು ಚಾಲನೆಯಲ್ಲಿ ಕನಿಷ್ಠ ಮೂರು ವರ್ಷಗಳ ಅನುಭವ ಹೊಂದಿರಬೇಕು
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಆಗಿದ್ದು, ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ:ಈ ಹುದ್ದೆಗೆ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಮಾಡಲಾಗಿದೆ. ಉಳಿದ ಅಭ್ಯರ್ಥಿಗಳ 500 ರೂ. ಅರ್ಜಿ ಶುಲ್ಕವನ್ನು ಭರಿಸಬೇಕು.
ವೇತನ: ಈ ಹುದ್ದೆಗೆ ಮಾಸಿಕ 21,400 ರೂ ನಿಂದ 42,000 ರೂ.ವರೆಗೆ ನಿಗದಿ ಪಡಿಸಲಾಗಿದೆ.