ಕರ್ನಾಟಕ

karnataka

ETV Bharat / state

ಚಿಕಿತ್ಸೆ ನಿರಾಕರಿಸುವ ಖಾಸಗಿ ವೈದ್ಯರ ವಿರುದ್ಧ ಈ ನಂಬರ್​ಗೆ ದೂರು ನೀಡಿ... - Karnataka Medical council

ಕೊರೊನಾ ಸೋಂಕು ರಹಿತ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವ ವೈದ್ಯರ ವಿರುದ್ಧ ದೂರು ನೀಡಲು ಕೆಎಂಸಿ ಹೆಲ್ಪ್ ಲೈನ್ ಆರಂಭಿಸಿದೆ.

High court
High court

By

Published : Aug 14, 2020, 5:25 PM IST

ಬೆಂಗಳೂರು:ಕೊರೊನಾ ಸೋಂಕು ರಹಿತ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ವೈದ್ಯರ ವಿರುದ್ಧ ದೂರು ದಾಖಲಿಸಲು ಸಹಾಯವಾಣಿ ಆರಂಭಿಸಿದ್ದೇವೆ ಎಂದು ಕರ್ನಾಟಕ ವೈದ್ಯಕೀಯ ಪರಿಷತ್ ಹೈಕೋರ್ಟ್​​ಗೆ ಮಾಹಿತಿ ನೀಡಿದೆ.

ಕೊರೊನಾ ಸೋಂಕು ರಹಿತ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ವೈದ್ಯರು ಮತ್ತು ಆಸ್ಪತ್ರೆಗಳ ವಿರುದ್ಧ ಕ್ರಮ ಜರುಗಿಸಲು ಕೋರಿ ತುಮಕೂರು ಮೂಲದ ವಕೀಲ ರಮೇಶ ಎಲ್.ನಾಯಕ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಕೆಎಂಸಿ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಚಿಕಿತ್ಸೆ ನೀಡಲು ನಿರಾಕರಿಸುವ ವೈದ್ಯರ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಲು ಎರಡು ಹೆಲ್ಪ್ ಲೈನ್ ಆರಂಭಿಸಿದ್ದೇವೆ ಎಂದು ಮಾಹಿತಿ ನೀಡಿದರು. ಹಾಗೆಯೇ, ಚಿಕಿತ್ಸೆ ನಿರಾಕರಿಸದಂತೆ ಮತ್ತು ಚಿಕಿತ್ಸೆ ನಿರಾಕರಿಸಿದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವ ಸಂಬಂಧ ಸುತ್ತೋಲೆ ಹೊರಡಿಸಲಾಗಿದೆ ಎಂದು ಸರ್ಕಾರದ ಪರ ವಕೀಲರು ಪೀಠಕ್ಕೆ ವಿವರಿಸಿದರು.

ಹೇಳಿಕೆ ದಾಖಲಿಸಿಕೊಂಡ ಪೀಠ ಅರ್ಜಿ ಇತ್ಯರ್ಥಪಡಿಸಿ ಆದೇಶಿಸಿತು. ಕರ್ನಾಟಕ ವೈದ್ಯಕೀಯ ಪರಿಷತ್ತು ಕೊರೊನಾ ರಹಿತ ರೋಗಿಗಳಿಗೆ ವೈದ್ಯರು ಚಿಕಿತ್ಸೆ ನಿರಾಕರಿಸಿದಲ್ಲಿ 080-22200888 ದೂರವಾಣಿ ಸಂಖ್ಯೆಗೂ, 9916302328 ಮೊಬೈಲ್ ಸಂಖ್ಯೆಗೂ ಕರೆ ಮಾಡಿ ದೂರು ನೀಡಬಹುದಾಗಿದೆ ಎಂದು ತನ್ನ ಲಿಖಿತ ಹೇಳಿಕೆಯಲ್ಲಿ ಸರ್ಕಾರಕ್ಕೆ ತಿಳಿಸಿದೆ.

ABOUT THE AUTHOR

...view details