ಕರ್ನಾಟಕ

karnataka

ETV Bharat / state

ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ಕೆಎಂಎಫ್ ತೀರ್ಮಾನ: ಬಾಲಚಂದ್ರ ಜಾರಕಿಹೊಳಿ - ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೆಕ್ಕೆಜೋಳದಲ್ಲಿ ಸ್ಟಾರ್ಚ್, ಟಿಡಿಎನ್, ಜಿಡ್ಡಿನಾಂಶ, ಪ್ರೋಟಿನ್, ಅಂಶಗಳಿದ್ದು, ನಿಧಾನವಾಗಿ ಜೀರ್ಣವಾಗುವುದರಿಂದ ರಾಸುಗಳಿಗೆ ದೀರ್ಘಾವಧಿಗೆ ಶಕ್ತಿಯನ್ನು ನೀಡುವುದರ ಮೂಲಕ ಅಧಿಕ ಹಾಲು ಉತ್ಪಾದನೆಗೆ ಸಹಕಾರಿಯಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

KMF decision to purchase maize from farmers news
ಬಾಲಚಂದ್ರ ಜಾರಕಿಹೊಳಿ

By

Published : Dec 1, 2020, 10:06 PM IST

ಬೆಂಗಳೂರು: ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಗೆ ಮುಂದಾಗಿರುವ ಕೆಎಂಎಫ್, ಪ್ರತಿ ಟನ್‍ಗೆ 15 ಸಾವಿರ ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆದೇಶದ ಮೇರೆಗೆ ರೈತರ ಅನುಕೂಲಕ್ಕಾಗಿ ಮೆಕ್ಕೆಜೋಳ ಖರೀದಿಗೆ ನಮ್ಮ ಸಂಸ್ಥೆ ಮುಂದಾಗಿದ್ದು, ಅಂದಾಜು 1 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ಖರೀದಿಸಲು ಇಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಈ ವರ್ಷವೂ ಸಹ ಡಿಸೆಂಬರ್-ಜನವರಿ ತಿಂಗಳ ಅಂತ್ಯದವರೆಗೆ ಬೇಕಾಗುವ ಪ್ರಮಾಣದ ಮೆಕ್ಕೆಜೋಳದ ಖರೀದಿಗೆ ವ್ಯವಸ್ಥೆ ಮಾಡಲಾಗುವುದು. ವಾರ್ಷಿಕ ಅವಶ್ಯಕ ಪ್ರಮಾಣವನ್ನು ಮೆಕ್ಕೆಜೋಳದ ಸುಗ್ಗಿ ಕಾಲದಲ್ಲಿ ಅಂದರೆ ಅಕ್ಟೋಬರ್ ನಿಂದ ಫೆಬ್ರುವರಿ ತಿಂಗಳಲ್ಲಿ ಖರೀದಿಸಿ ದಾಸ್ತಾನು ಮಾಡಿಕೊಳ್ಳುವುದು ವಾಡಿಕೆಯಾಗಿದೆ ಎಂದು ಅವರು ತಿಳಿಸಿದರು.

ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರೈತರು ಬೆಳೆದ ಮೆಕ್ಕೆಜೋಳದ ದರ ಕುಸಿತ ಕಂಡಿರುವುದರಿಂದ ಕೆಎಂಎಫ್ ರೈತರ ನೆರವಿಗೆ ಮುಂದೆ ಬಂದಿದೆ. ಕಳೆದ ಮೇ ಮತ್ತು ಜೂನ್ ತಿಂಗಳಲ್ಲಿ 51,259 ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ರೈತರಿಂದ ಖರೀದಿ ಮಾಡಲಾಗಿತ್ತು ಎಂದರು.

ಕೋವಿಡ್ ಇನ್ನೂ ಇರುವುದರಿಂದ ರೈತರ ನೆರವಿಗೆ ಕೆಎಂಎಫ್ ಧಾವಿಸಿದ್ದು, ಮತ್ತೆ ಮೆಕ್ಕೆಜೋಳವನ್ನು ರೈತರಿಂದಲೇ ನೇರವಾಗಿ ಖರೀದಿಸಲು ತೀರ್ಮಾನಿಸಿದೆ ಎಂದು ಹೇಳಿದರು. ಕೆಎಂಎಫ್‍ನ 5 ಪಶು ಆಹಾರ ಘಟಕಗಳಿಂದ ವಾರ್ಷಿಕ 6.5 ರಿಂದ 7.0 ಲಕ್ಷ ಮೆಟ್ರಿಕ್ ಟನ್ ಪಶು ಆಹಾರ ಉತ್ಪಾದನೆಯನ್ನು ಮಾಡಲಾಗುತ್ತಿದೆ.

ಪಶು ಆಹಾರ ಉತ್ಪಾದನೆಗೆ ವಾರ್ಷಿಕ ಸರಾಸರಿ 2.20 ಲಕ್ಷ ಮೆಟ್ರಿಕ್ ಟನ್‍ಗಳಷ್ಟು ಮೆಕ್ಕೆ ಜೋಳ ಅವಶ್ಯಕತೆ ಇದ್ದು, ನಂದಿನಿ ಗೋಲ್ಡ್ ಪಶು ಆಹಾರದಲ್ಲಿ ಶಕ್ತಿಯ ಪ್ರಮಾಣವನ್ನು ಹೆಚ್ಚಿಸಲು ಶೇ. 35 ರಷ್ಟು ಮೆಕ್ಕೆಜೋಳವನ್ನು ಉಪಯೋಗಿಸಲಾಗುತ್ತಿದೆ. ಮೆಕ್ಕೆಜೋಳದಲ್ಲಿ ಸ್ಟಾರ್ಚ್, ಟಿಡಿಎನ್, ಜಿಡ್ಡಿನಾಂಶ, ಪ್ರೋಟಿನ್, ಅಂಶಗಳಿದ್ದು, ನಿಧಾನವಾಗಿ ಜೀರ್ಣವಾಗುವುದರಿಂದ ರಾಸುಗಳಿಗೆ ದೀರ್ಘಾವಧಿಗೆ ಶಕ್ತಿಯನ್ನು ನೀಡುವುದರ ಮೂಲಕ ಅಧಿಕ ಹಾಲು ಉತ್ಪಾದನೆಗೆ ಸಹಕಾರಿಯಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಇದನ್ನೂ ಓದಿ:ರಾಜ್ಯದ ಎಲ್ಲೆಡೆ ಹಾಲು ಪೂರೈಕೆ: ಭಯ ಬೇಡ ಎಂದು ಜಾರಕಿಹೊಳಿ ಅಭಯ

ABOUT THE AUTHOR

...view details