ಬೆಂಗಳೂರು: ಕೊರೊನಾ ವೈರಸ್ ವಿರುದ್ಧ ಹೋರಾಡಲು ಸಂಘ ಸಂಸ್ಥೆಗಳು ದೇಣಿಗೆ ನೀಡಲು ಒಂದೊಂದಾಗಿ ಮುಂದೆ ಬರುತ್ತಿದ್ದು, ಇಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್) ವತಿಯಿಂದ 5 ಕೋಟಿ ರೂ. ದೇಣಿಗೆಯಾಗಿ ನೀಡಲಾಯಿತು.
ಮುಖ್ಯಮಂತ್ರಿ ಪರಿಹಾರ ನಿಧಿಗೆ 5 ಕೋಟಿ ರೂ ದೇಣಿಗೆ ನೀಡಿದ ಕೆಎಂಎಫ್ - ಮುಖ್ಯಮಂತ್ರಿ ಪರಿಹಾರ ನಿಧಿಗೆ ಕೆಎಂಎಫ್ 5 ಕೋಟಿ ರೂಪಾಯಿ ದೇಣಿಗೆ
ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ವತಿಯಿಂದ 5 ಕೋಟಿ ರೂಪಾಯಿಗಳ ಚೆಕ್ ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ಹಸ್ತಾಂತರಿಸಲಾಯಿತು.
![ಮುಖ್ಯಮಂತ್ರಿ ಪರಿಹಾರ ನಿಧಿಗೆ 5 ಕೋಟಿ ರೂ ದೇಣಿಗೆ ನೀಡಿದ ಕೆಎಂಎಫ್ KMF donates Rs 5 crore to CM's relief fund](https://etvbharatimages.akamaized.net/etvbharat/prod-images/768-512-6712677-28-6712677-1586345433848.jpg)
ಮುಖ್ಯಮಂತ್ರಿ ಪರಿಹಾರ ನಿಧಿಗೆ ಕೆಎಂಎಫ್ 5 ಕೋಟಿ ರೂಪಾಯಿ ದೇಣಿಗೆ
ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಕೆಎಂಎಫ್ ಸದಸ್ಯರು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದರು. ಈ ಸಂದರ್ಭದಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ವ್ಯವಸ್ಧಾಪಕ ನಿರ್ದೇಶಕ ಬಿ.ಸಿ.ಸತೀಶ್ ಮತ್ತಿತರರು ಹಾಜರಿದ್ದರು.