ಬೆಂಗಳೂರು: ನಂದಿನಿ ಮೊಸರು, ಲಸ್ಸಿ ಮತ್ತು ಮಜ್ಜಿಗೆ ದರ ಮತ್ತು ಇತರ ಹಾಲಿನ ಉತ್ಪನ್ನಗಳನ್ನು ಇಂದಿನಿಂದ ಜಿ.ಎಸ್.ಟಿ ಜಾರಿ ಸಂಬಂಧ ಹೆಚ್ಚಿಸಿ ಪರಿಷ್ಕರಿಸಲಾಗಿತ್ತು. ಈಗ ಕೆಲ ಉತ್ಪನ್ನಗಳ ದರಗಳನ್ನು ಇಳಿಕೆ ಮಾಡಿ ಕೆ.ಎಂ.ಎಫ್ ವ್ಯವಸ್ಥಾಪಕ ನಿರ್ದೇಶಕ ಸತೀಶ್ ಆದೇಶ ಹೊರಡಿಸಿದ್ದಾರೆ.
ಎಲ್ಲ ಹಾಲಿನ ಉತ್ಪನ್ನಗಳ ದರವನ್ನು 50 ಪೈಸೆಯಿಂದ 1.50 ರಷ್ಟು ಕಡಿಮೆ ಮಾಡಲಾಗಿದೆ. ಇಂದು ಈ ಉತ್ಪನ್ನಗಳ ದರಗಳನ್ನು 1 ರೂ. ನಿಂದ 3 ರೂ. ರಷ್ಟು ಹೆಚ್ಚಿಸಲಾಗಿತ್ತು. ಆದರೆ, ಗ್ರಾಹಕರಿಂದ ಬೆಲೆ ಏರಿಕೆಗೆ ಆಕ್ರೋಶ ವ್ಯಕ್ತವಾಗಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.