ಬೆಂಗಳೂರು : ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಜಯನಗರ 4ನೆ ಬ್ಲಾಕ್, 32ನೇ ಮೇನ್ನಲ್ಲಿ ಕಾರ್ ಮೇಲೆ ಮರ ಬಿದ್ದ ಪರಿಣಾಮ ಕಾರ್ ಜಖಂ ಆಗಿದೆ.
ಕಾರಿನ ಮೇಲೆ ಬಿದ್ದ ಮರದ ಕೊಂಬೆ... ಬೆಂಗಳೂರಲ್ಲಿ ಮಳೆ ಅವಾಂತರ
ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ ನಗರದಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಜಯನಗರದಲ್ಲಿ ಕಾರಿನ ಮೇಲೆ ಮರದ ಕೊಂಬೆಯೊಂದು ಬಿದ್ದಿದೆ.
ಬೃಹತ್ ಮರದ ಕೊಂಬೆ ಬಿದ್ದು ಕಾರು ಜಖಂ
ಸಿಲಿಕಾನ್ ಸಿಟಿಯಲ್ಲಿ ಸುರಿದ ಭಾರಿ ಮಳೆಯಿಂದ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ಇನ್ನು ಜಯನಗರದಲ್ಲಿ ಕಾರಿನ ಮೇಲೆ ಮರದ ಕೊಂಬೆ ಬಿದ್ದ ಪರಿಣಾಮ ಕಾರು ಜಖಂಗೊಂಡಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ನಗರದ ಮೆಜೆಸ್ಟಿಕ್, ಮೈಸೂರು ರಸ್ತೆ, ಚಾಲುಕ್ಯ ಸರ್ಕಲ್, ಕೋರಮಂಗಲ, ಬಿಟಿಎಂ ಲೇಔಟ್, ಸೋನಿ ಜಂಕ್ಷನ್ ಸೇರಿದಂತೆ ಪ್ರಮುಖ ಜಂಕ್ಷನ್ಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗಿದೆ. ಸದ್ಯ ಮಳೆರಾಯ ಬ್ರೇಕ್ ನೀಡಿದ್ದಾನೆ.