ಬೆಂಗಳೂರು :ಮಹಾನಗರದ ದಕ್ಷಿಣದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿಯುತ್ತಿದ್ದು, ಸಂಜೆ 7 ಗಂಟೆಯಿಂದ ಬೀಸಿದ ಗಾಳಿಯ ರಭಸಕ್ಕೆ ಬಹುತೇಕ ಎಲ್ಲಾ ಕಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಬೆಂಗಳೂರು ದಕ್ಷಿಣದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ - kannada news
ಬೆಂಗಳೂರು ದಕ್ಷಿಣ ವಲಯದಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಮಳೆಯಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಜನರು ಪರದಾಡುವಂತಾಗಿದೆ.
ಬನಶಂಕರಿ, ಜಯನಗರ, ಜೆಪಿ ನಗರ ಬೊಮ್ಮನಹಳ್ಳಿ, ಬನ್ನೇರುಘಟ್ಟ ರಸ್ತೆ, ಕನಕಪುರ ರಸ್ತೆ ಸೇರಿ ವಿವಿಧೆಡೆ ಭಾರಿ ಮಳೆಯಾಗುತ್ತಿದೆ, ಅಲ್ಲಲ್ಲಿ ವಿದ್ಯುತ್ ಕಂಬಗಳು ಮತ್ತು ಮರಗಳು ನೆಲಕ್ಕುರುಳಿದ್ದು, ಸದ್ಯಕ್ಕೆ ಯಾವುದೇ ಪ್ರಾಣಾಪಾಯದ ಬಗ್ಗೆ ಅಥವಾ ಹಾನಿಯ ಬಗ್ಗೆ ವರದಿಯಾಗಿಲ್ಲ.
ಇದಕ್ಕೆ ಮುಖ್ಯ ಕಾರಣ, ಮೇಲ್ಮೈ ಸುಳಿಗಾಳಿ ಹಿನ್ನೆಲೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುತ್ತಿದ್ದು, ಅನಾಹುತಗಳು ಸಂಭವಿಸುವ ಸಾಧ್ಯತೆ ಹೆಚ್ಚಿದೆ, ನಗರದಲ್ಲಿ ಇನ್ನೂ ನಾಲ್ಕೈದು ದಿನ ಮಳೆ ಸಾಧ್ಯತೆಯಿದೆ. ದಕ್ಷಿಣ ಒಳನಾಡು, ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.