ಬೆಂಗಳೂರು :ರೈತ ಮಸೂದೆ ತಿದ್ದುಪಡಿ ಕಾಯ್ದೆ ಜಾರಿ ಸಂಬಂಧ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಸಹಕರಿಸಿದ ಎಲ್ಲಾ ಬಾಂಧವರಿಗೂ ಧನ್ಯವಾದ ಅರ್ಪಿಸಿದ ರೈತ ಸಂಘಟನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಇದೇ ಸಂದರ್ಭ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಚಾಲೆಂಜ್ವೊಂದನ್ನ ಹಾಕಿದ್ದಾರೆ.
ಈ ಬಗ್ಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ಭೂ ಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಿರುವ ಕೇಂದ್ರ, ರಾಜ್ಯ ಸರ್ಕಾರಗಳ ನಡೆ ಸರಿಯಲ್ಲ. ಕಾಯ್ದೆ ಜಾರಿಯಾದ್ರೆ ರೈತರು ಬೀದಿಗೆ ಬೀಳಲಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಎಚ್ಚರಿಸಲು ಬಂದ್ಗೆ ಕರೆ ನೀಡಿದ್ದೆವು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸುಗ್ರೀವಾಜ್ಞೆ ಮೂಲಕ ಹೊರಡಿಸಿರುವ ಕಾಯ್ದೆಗಳ ಬಗ್ಗೆ ರಾಜ್ಯದಲ್ಲಿರುವ ಎಲ್ಲಾ ಹಳ್ಳಿಗಳಿಗೂ ಹೋಗಿ ಮನವರಿಕೆ ಮಾಡಿಕೊಡುತ್ತೇವೆ ಎಂಬ ಹೇಳಿಕೆ ನೀಡಿದ್ದಾರೆ. ಅವರಂತೆ ನಾವೂ ಸಹ ರಾಜ್ಯದಲ್ಲಿರುವ 28,800 ಹಳ್ಳಿಗಳಿಗೆ ಹೋಗಿ ರೈತರಿಗೆ ಮನವರಿಕೆ ಮಾಡಿಕೊಡುತ್ತೇವೆ.