ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರ ರೆಡ್ಡಿ, ಬೀಸೆಗೌಡ, ರಾಮಲಿಂಗಾರೆಡ್ಡಿ, ಗೋಪಾಲ ಕೃಷ್ಣ ಮತ್ತಿತರರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಶನಿವಾರ ರಾತ್ರಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಕೋಲಾರ ಜಿಲ್ಲಾ ರಾಜಕೀಯ ಬೆಳವಣಿಗೆಗಳು ಹಾಗೂ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಆಯ್ಕೆ ಸಂಬಂಧ ಚರ್ಚೆ ನಡೆಸಿದ್ರು. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ವಿಚಾರದಲ್ಲಿ ಕೈಗೊಳ್ಳಲಾಗಿರುವ ತೀರ್ಮಾನಗಳು ಹಾಗೂ ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ ಜಿಲ್ಲೆಯಲ್ಲಿ ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚಿಸಲಾಯಿತು.
ಲೋಕಸಭೆ ಚುನಾವಣೆಯಲ್ಲಿ ಸೋತ ನಂತರ ಕೆ ಎಚ್ ಮುನಿಯಪ್ಪ ಕ್ಷೇತ್ರದಲ್ಲಿ ತಮ್ಮ ಹಿಡಿತವನ್ನು ಕಡಿಮೆ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ಮುಂದಿನ ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಮುನಿಯಪ್ಪ ಸ್ಪರ್ಧಿಸಲಿದ್ದಾರೆ.
ಇದೇ ವೇಳೆ ಬೇರೊಬ್ಬ ಸಮರ್ಥ ಅಭ್ಯರ್ಥಿಯ ಆಯ್ಕೆ ವಿಚಾರ ಕೂಡ ಚರ್ಚೆಯಾಗಿದೆ. ರಾಜ್ಯ ಸರ್ಕಾರದಿಂದ ಕೋಲಾರ ಜಿಲ್ಲೆಯನ್ನು ಕಡೆಗಣಿಸಲಾಗುತ್ತಿದೆ. ಅಲ್ಲದೆ ಮುಂಬರುವ ಚುನಾವಣೆ ವೇಳೆಗೆ ಬಿಜೆಪಿ ಇಲ್ಲಿ ಬಲಗೊಳ್ಳುವುದನ್ನು ತಡೆಯಲು ಕೈಗೊಳ್ಳಬಹುದಾದ ಕ್ರಮಗಳು ಹಾಗೂ ಮುಂಬರುವ ದಿನಗಳಲ್ಲಿ ಪಕ್ಷ ಬಲವರ್ಧನೆಗೆ ಸಮಾವೇಶ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಮಾತುಕತೆ ನಡೆದಿದೆ ಎನ್ನಲಾಗ್ತಿದೆ.
ಇದನ್ನೂ ಓದಿ:27 ವರ್ಷ ಅನಾಥ ಶವಗಳ ಅಂತ್ಯಸಂಸ್ಕಾರ ಮಾಡಿದ ಶರೀಫ್ಗೆ ಬೇಕಿದೆ ಆಸರೆ... ಪದ್ಮಶ್ರೀ ಘೋಷಣೆಯಾದ್ರೂ ಇನ್ನೂ ಸಿಕ್ಕಿಲ್ಲ ಪುರಸ್ಕಾರ!