ಕರ್ನಾಟಕ

karnataka

ETV Bharat / state

ವಿಧಾನ ಪರಿಷತ್​​ ಸಭಾನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ ನೇಮಕ - Current legislative council chairman

ಅಕ್ಟೋಬರ್ 10ರಿಂದ ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿದ್ದು, ವಿಧಾನ ಪರಿಷತ್​​ ಸಭಾನಾಯಕರಾಗಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ.

ಕೋಟಾ ಶ್ರೀನಿವಾಸ ಪೂಜಾರಿ

By

Published : Oct 7, 2019, 8:33 PM IST

ಬೆಂಗಳೂರು:ವಿಧಾನ ಪರಿಷತ್ ಸಭಾನಾಯಕರನ್ನಾಗಿ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಆದೇಶ ಪ್ರತಿ

ಅಕ್ಟೋಬರ್ 10ರಿಂದ ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿದ್ದು, ಅದಕ್ಕೂ ಮುನ್ನ ವಿಧಾನ ಪರಿಷತ್ ಸಭಾನಾಯಕರ ಆಯ್ಕೆ ಮಾಡಬೇಕಿದ್ದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಸಚಿವ ಸ್ಥಾನದ ಜವಾಬ್ದಾರಿ ನಿರ್ವಹಿಸುತ್ತಿರುವ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಸಭಾನಾಯಕರನ್ನಾಗಿ ಸಿಎಂ ಬಿಎಸ್​ವೈ ನೇಮಕಗೊಳಿಸಿ ಸಭಾಪತಿಗಳಿಗೆ ಪತ್ರ ಕಳುಹಿಸಿಕೊಟ್ಟಿದ್ದಾರೆ.

ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾಗಿ ಕಾರ್ಯನಿರ್ವಹಿಸಿದ್ದ ಕೋಟಾ ಶ್ರೀನಿವಾಸ ಪೂಜಾರಿ, ಆಡಳಿತ ಪಕ್ಷದ ವಿರುದ್ಧ ಸಮರ್ಥವಾಗಿ ಕೆಲಸ ಮಾಡಿದ್ದರು. ಇದೀಗ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕರಾಗಿದ್ದ ಕೋಟಾ ಅವರನ್ನ ಸಭಾನಾಯಕರನ್ನಾಗಿ ನೇಮಕ ಮಾಡಲಾಗಿದೆ.

ABOUT THE AUTHOR

...view details