ಬೆಂಗಳೂರು: ನಗರದಲ್ಲಿ ಇಂದು 2,979 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,05,749 ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರದಲ್ಲಿ 2,979 ಕೋವಿಡ್ ಪಾಸಿಟಿವ್: 3,259 ಮಂದಿ ಗುಣಮುಖ - ಕೊರೊನಾ
ಇಂದು ಬೆಂಗಳೂರಿನಲ್ಲಿ 2,979 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಅದೇ ರೀತಿ 29 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೊತೆಗೆ 3,259 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಕೋವಿಡ್ ಪಾಸಿಟಿವ್
ಇಂದು ಗುಣಮುಖರಾದವರ ಸಂಖ್ಯೆಯಲ್ಲೂ ಏರಿಕೆ ಕಂಡಿದ್ದು, 3,259 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ 69,861 ಮಂದಿ ಬಿಡುಗಡೆಯಾಗಿದ್ದಾರೆ. ಆದರೆ ಸಾವಿನ ಸಂಖ್ಯೆಯಲ್ಲೂ ದಿನನಿತ್ಯ ಏರಿಕೆಯಾಗುತ್ತಲೇ ಇದೆ. ಇಂದು 28 ಮಂದಿ ಮೃತಪಟ್ಟಿದ್ದು, ಈವರೆಗೆ 1,663 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.
ಸಕ್ರಿಯ ಪ್ರಕರಣಗಳಲ್ಲಿ ಒಟ್ಟು 34,224 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರತಿನಿತ್ಯ ಸುಮಾರು 25 ಸಾವಿರ ಕೋವಿಡ್ ಪರೀಕ್ಷೆಗಳು ನಡೆಯುತ್ತಿದೆ.