ಕರ್ನಾಟಕ

karnataka

ETV Bharat / state

ಮೈಸೂರು ಪಾಲಿಕೆ ಮಾಜಿ ಸದಸ್ಯ ಸೋಮಶೇಖರ್​ ನಿಧನಕ್ಕೆ ಡಿಕೆಶಿ ಸಂತಾಪ - ವಕೀಲ ಸೋಮಶೇಖರ್ ನಿಧನಕ್ಕೆ ಸಂತಾಪ

ಮೈಸೂರು ಪಾಲಿಕೆ ಮಾಜಿ ಸದಸ್ಯ ಸೋಮಶೇಖರ್ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಸಂತಾಪ ಸೂಚಿಸಿದ್ದಾರೆ.

KPCC president condoles
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ

By

Published : May 2, 2020, 10:54 PM IST

ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಸೋಮಶೇಖರ್ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​

ನನ್ನ ಉತ್ತಮ ಒಡನಾಡಿಗಳಲ್ಲಿ ಒಬ್ಬರಾಗಿದ್ದರು. ಹೃದಯಾಘಾತದಿಂದ ಮೃತಪಟ್ಟಿರುವ ಸುದ್ದಿ ತಿಳಿದು ತುಂಬಾ ನೋವಾಯಿತು. ಇವರ ತಂದೆ ದಾಸೇಗೌಡರು ಕೂಡ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದವರು ಎಂದು ಹೇಳಿದರು.

ಇವರ ಕುಟುಂಬ ಮೈಸೂರಿನಲ್ಲಿ ಪಕ್ಷಕ್ಕೆ ತನ್ನದೇ ಆದ ಸೇವೆ ನೀಡಿದೆ. ಅವರ ಅಕಾಲಿಕ ಸಾವು ತೀವ್ರ ಆಘಾತ ತಂದಿದೆ. ಸೋವಶೇಖರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಕುಟುಂಬ ಸದ್ಯಸ್ಯರಿಗೆ ಭಗವಂತ ನೀಡಲಿ ಎಂದು ಡಿಕೆಶಿ ಸಂತಾಪ ಸೂಚಿಸಿದ್ದಾರೆ.

ABOUT THE AUTHOR

...view details