ಬೆಂಗಳೂರು/ನವದೆಹಲಿ: ಬಿಜೆಪಿ ಸರ್ಕಾರ ದಿನನಿತ್ಯ ಜನಸಾಮಾನ್ಯರ ಜೇಬು ಪಿಕ್ ಪಾಕೆಟ್ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಹರಿಹಾಯ್ದಿದ್ದಾರೆ.
ಬೆಲೆ ಏರಿಕೆ ವಿರುದ್ಧ ನವದೆಹಯಲ್ಲಿ ಭಾನುವಾರ ರಾಷ್ಟ್ರೀಯ ಕಾಂಗ್ರೆಸ್ ನಾಯಕರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯುವಕರು, ಮಹಿಳೆಯರು ಸೇರಿದಂತೆ ಸಮಾಜದ ಪ್ರತಿಯೊಬ್ಬ ಪ್ರಜೆಯನ್ನು ಸುಲಿಗೆ ಮಾಡಲಾಗುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಿದ್ದು, ಜನರ ಆದಾಯ ಪಾತಾಳಕ್ಕೆ ಕುಸಿಯುತ್ತಿದೆ. ಇದರ ವಿರುದ್ಧ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ದೆಹಲಿ ಚಲೋ ಪ್ರತಿಭಟನೆ ಮಾಡುತ್ತಿದೆ ಎಂದು ಹೇಳಿದರು.