ಬೆಂಗಳೂರು : ಸಾಹಿತಿಗಳು, ರಂಗಕರ್ಮಿಗಳು ಹಾಗೂ ಹೋರಾಟಗಾರರೊಂದಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನಗರದಲ್ಲಿ ಸಂವಾದ ನಡೆಸಿದರು.
ಸಾಹಿತಿಗಳು, ರಂಗಕರ್ಮಿಗಳೊಂದಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಂವಾದ..
ಸಾಹಿತಿಗಳು, ರಂಗಕರ್ಮಿಗಳು ಹಾಗೂ ಹೋರಾಟಗಾರರೊಂದಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಂವಾದ ನಡೆಸಿದರು.
ಬೆಂಗಳೂರಿನ ಕೃಷಿ ತಾಂತ್ರಿಕ ಸಂಸ್ಥೆಯಲ್ಲಿ ಸಂವಾದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಇವರಿಂದ ಮಾಹಿತಿ ಪಡೆದುಕೊಳ್ಳಲಾಯಿತು. ಪ್ರಬಲ ತತ್ವ, ಸಿದ್ಧಾಂತ ಹೊಂದಿರುವ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಮರು ಸಂಘಟಿಸಬೇಕಿದೆ. ಈ ಸಂದರ್ಭ ಸಾಹಿತಿ, ರಂಗಕರ್ಮಿ ಹಾಗೂ ಹೋರಾಟಗಾರರಿಂದ ಸಿಗಬಹುದಾದ ಮಾಹಿತಿಯನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಲೆ ಹಾಕಿದರು. ಒಂದು ಗಂಟೆ ಕಾಲ ನಡೆದ ಸಂವಾದದಲ್ಲಿ ಪಾಲ್ಗೊಂಡಿದ್ದ ಗಣ್ಯರು ಕಾಂಗ್ರೆಸ್ ನಾಯಕರಿಗೆ ಸೂಕ್ತ ಸಲಹೆ, ಸೂಚನೆ, ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ಡಾ ಎಲ್. ಹನುಮಂತಯ್ಯ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಕಾಂಗ್ರೆಸ್ ಮುಖಂಡರು, ಸಾಹಿತಿ, ರಂಗಕರ್ಮಿ, ಹೋರಾಟಗಾರರಾದ ಮುಖ್ಯಮಂತ್ರಿ ಚಂದ್ರು, ಎಸ್.ಜಿ.ಸಿದ್ದರಾಮಯ್ಯ, ಬಿ.ಟಿ.ಲಲಿತಾನಾಯಕ್ ಹಾಗೂ ನಾಡಿನ ಪ್ರಮುಖರು ಉಪಸ್ಥಿತರಿದ್ದರು.