ಕರ್ನಾಟಕ

karnataka

ETV Bharat / state

ಭಾರತ್ ಜೋಡೋ ಯಾತ್ರೆ ಸಿದ್ಧತೆ ಕುರಿತು ಸಭೆ ನಡೆಸಿ ಚರ್ಚಿಸಿದ್ದೇನೆ: ಡಿಕೆಶಿ - ಕೆಪಿಸಿಸಿ ಕಚೇರಿಯಲ್ಲಿ ವಿವಿಧ ಘಟಕಗಳ ಸಭೆ

ಭಾರತ ಐಕ್ಯತಾ ಯಾತ್ರೆ ಸಿದ್ಧತೆ ಕುರಿತು ಸಭೆ ನಡೆಸಿ ಚರ್ಚಿಸಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

India Unity Yatra  KPCC President DK Shivakumar  KPCC President DK Shivakumar Meeting  Meeting on preparations for India Unity Yatra  ಭಾರತ ಐಕ್ಯತಾ ಯಾತ್ರೆ  ಭಾರತ ಐಕ್ಯತಾ ಯಾತ್ರೆ ಸಿದ್ಧತೆ ಕುರಿತು ಸಭೆ  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ  ಕೆಪಿಸಿಸಿ ಕಚೇರಿಯಲ್ಲಿ ವಿವಿಧ ಘಟಕಗಳ ಸಭೆ  ರಣದೀಪ್ ಸಿಂಗ್ ಸುರ್ಜೇವಾಲ
ಭಾರತ ಐಕ್ಯತಾ ಯಾತ್ರೆ ಸಿದ್ಧತೆ ಕುರಿತು ಸಭೆ ನಡೆಸಿ ಚರ್ಚಿಸಿದ್ದೇನೆ ಎಂದ ಡಿಕೆಶಿ

By

Published : Sep 22, 2022, 8:51 AM IST

ಬೆಂಗಳೂರು:ಭಾರತ್ ಜೋಡೋ ಯಾತ್ರೆಯಲ್ಲಿ ಪಾದಯಾತ್ರಿಗಳನ್ನು ನಿಗದಿತ ದಿನ ಕರೆ ತರಲು ನಮ್ಮ ನಾಯಕರಿಗೆ ಸೂಚಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ವಿವಿಧ ಘಟಕಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, ಶುಕ್ರವಾರ ಬೆಳಗ್ಗೆ ಯಾತ್ರೆಯ ಎಲ್ಲಾ ಸಮಿತಿ ಅಧ್ಯಕ್ಷರನ್ನು ರಾಷ್ಟ್ರೀಯ ನಾಯಕರಾದ ಕೆ.ಸಿ.ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಭೇಟಿ ಮಾಡಿ ಸಭೆ ನಡೆಸಲಿದ್ದಾರೆ. ನಂತರ ಸುರ್ಜೇವಾಲ ಗುಂಡ್ಲುಪೇಟೆಯಿಂದ ರಾಯಚೂರಿನವರೆಗೆ ಯಾತ್ರೆಯ ಮಾರ್ಗದ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದರು.

ಮುಖ್ಯಮಂತ್ರಿಗಳ ವಿರುದ್ಧ ಕಾಂಗ್ರೆಸ್ ಅಭಿಯಾನ ಕುರಿತು ಕೇಳಿದ ಪ್ರಶ್ನೆಗೆ, ಬಿಜೆಪಿ ನಾಯಕರು ಸಿದ್ದರಾಮಯ್ಯ ಅವರನ್ನು ನಿದ್ರಾಮಯ್ಯ ಎಂದು ಲೇವಡಿ ಮಾಡುತ್ತಿದ್ದರು. ನನ್ನನ್ನು ಕೊತ್ವಾಲ್ ರಾಮಚಂದ್ರನ ಶಿಷ್ಯ ಎಂದು ಕರೆಯುತ್ತಾರೆ. ರಾಜಕಾರಣದಲ್ಲಿ ಅಧಿಕಾರದಲ್ಲಿರುವವರು ಇವೆಲ್ಲವನ್ನೂ ಅರಗಿಸಿಕೊಳ್ಳಬೇಕು. ಈ ಸರ್ಕಾರ 40% ಕಮಿಷನ್ ಸರ್ಕಾರ ಎಂದು ನಾವು ಆರೋಪ ಮಾಡಿದ್ದೇವಾ?.. ಅಧಿಕಾರದಲ್ಲಿರುವವರು ಹಾಗೂ ಜವಾಬ್ದಾರಿ ಹೊತ್ತಿರುವವರ ಕಡೆ ಬೆಟ್ಟು ಮಾಡುವುದು ಸಹಜ. ವ್ಯಂಗ್ಯಚಿತ್ರಗಳಲ್ಲಿ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿಗಳನ್ನು ಕ್ರಿಯಾತ್ಮಕ ರೀತಿಯಲ್ಲಿ ಲೇವಡಿ ಮಾಡುತ್ತಾರೆ. ಭ್ರಷ್ಟಾಚಾರ ವಿಚಾರವಾಗಿ ಬೊಮ್ಮಾಯಿ ಅವರ ಸರ್ಕಾರದ ವಿರುದ್ಧ ವಿವಿಧ ರೀತಿಯಲ್ಲಿ ಪ್ರಶ್ನಿಸಲಾಗಿದೆ. ವಿವಿಧ ರೀತಿಯಲ್ಲಿ ಜನರಿಗೂ ಈ ವಿಚಾರ ಮುಟ್ಟಿಸಬೇಕಾಗುತ್ತದೆ. ಹೀಗಾಗಿ ಈ ರೀತಿ ಮಾಡಲಾಗಿದೆ. ಇದರಲ್ಲಿ ಯಾವುದೇ ತಪ್ಪಿಲ್ಲ. ಇದು ಆರೋಗ್ಯಕರ ರಾಜಕೀಯ ಎಂದು ತಿಳಿಸಿದರು.

ಇದರ ವಿರುದ್ಧ ದೂರು ನೀಡಿ ಕ್ರಮ ಕೈಗೊಳ್ಳುತ್ತೇವೆ ಎಂಬ ಸಿಎಂ ಹೇಳಿಕೆ ಬಗ್ಗೆ ಕೇಳಿದಾಗ, "ಅವರು ದೂರು ನೀಡಲಿ. ಅವರ ಬಗ್ಗೆ ವ್ಯಂಗ್ಯಚಿತ್ರಗಳು ಬಂದಾಗ ಯಾಕೆ ದೂರು ನೀಡಲಿಲ್ಲ?. ಇದರಲ್ಲಿ ತಪ್ಪೇನು?. ಸಾರ್ವಜನಿಕ ಜೀವನದಲ್ಲಿ ಇರುವಾಗ ಇದನ್ನು ಸ್ವೀಕರಿಸಬೇಕು" ಎಂದು ಡಿಕೆಶಿ ತಿಳಿಸಿದರು.

ಇದನ್ನೂ ಓದಿ:ಡಿಕೆಶಿ ವಿರುದ್ಧದ ತೆರಿಗೆ ವಂಚನೆ ಪ್ರಕರಣ: ಹೈಕೋರ್ಟ್​​ ಅವಲೋಕನಗಳಿಗೆ ಮಧ್ಯಂತರ ತಡೆ, ಸುಪ್ರೀಂನಿಂದ ನೋಟಿಸ್ ಜಾರಿ

ABOUT THE AUTHOR

...view details