ದೇವನಹಳ್ಳಿ/ಬೆಂಗಳೂರು :ಮೇಕೆದಾಟು ಯೋಜನೆ ವಿಳಂಬದ ಬಗ್ಗೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ತಮಿಳುನಾಡಿನವರದ್ದು ಜಮೀನಿಲ್ಲ, ಹಣವಿಲ್ಲ, ನೀರಿಲ್ಲ. ಹಾಗಾಗಿ, ಆದಷ್ಟು ಬೇಗ ಕಾಮಾಗಾರಿ ಆರಂಭಿಸುವಂತೆ ಒತ್ತಾಯಿಸಿದರು.
ಮೈಸೂರಿನಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡಿಕೆಶಿ ಮಾಧ್ಯಮದೊಂದಿಗೆ ಮಾತನಾಡಿದರು. ಮೇಕೆದಾಟು ಯೋಜನೆ ನಮ್ಮ ಕೈಯಲ್ಲಿದೆ. ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಒಟ್ಟಾಗಿವೆ. ಎಲ್ಲಾ ಕ್ಲಿಯರೆನ್ಸ್ ಮುಗಿದಿದೆ. ಕೇಂದ್ರ ಸರ್ಕಾರದಿಂದ ಹಣ ಕೇಳುವ ಅವಶ್ಯಕತೆ ಇಲ್ಲ ಎಂದರು.