ಬೆಂಗಳೂರು :ಕಾಮಾಲೆ ಕಣ್ಣಿಗೆ ಕಾಣೋದೆಲ್ಲ ಹಳದಿ. ಏನೇ ಆದ್ರೂ ಕಾಂಗ್ರೆಸ್ ಕಾರಣ ಅಂತಾರೆ. ಬಿಜೆಪಿಯವರು ಕರ್ನಾಟಕವನ್ನು ಸ್ವಲ್ಪ ಶಾಂತಿಯಿಂದ ಇರುಲು ಬಿಟ್ಟರೆ ಸಾಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು. ಬಾಬು ಜಗಜೀವನರಾಮ್ ಜಯಂತಿ ಆಚರಣೆ ಸಂಬಂಧ ಶಿವಕುಮಾರ್ ಅವರ ಸದಾಶಿವನಗರದ ನಿವಾಸದಲ್ಲಿ ಕೇಂದ್ರದ ಮಾಜಿ ಸಚಿವ ಕೆ ಹೆಚ್ ಮುನಿಯಪ್ಪ, ರಾಜ್ಯಸಭೆ ಸದಸ್ಯ ಎಲ್.ಹನುಮಂತಪ್ಪ, ಮಾಜಿ ಸಚಿವ ಆಂಜನೇಯ, ಮಾಜಿ ಸಂಸದ ಚಂದ್ರಪ್ಪ, ಮುಖಂಡ ಕೆ ಬಿ ಕೃಷ್ಣಮೂರ್ತಿ ಮತ್ತಿತರರ ಜತೆ ಬುಧವಾರ ಸಮಾಲೋಚನೆ ನಡೆಸಿದರು.
ಈ ವೇಳೆ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಘಟನೆಗೆ ಕಾಂಗ್ರೆಸ್ ಕಾರಣ ಎಂಬ ಆರೋಪದ ಬಗ್ಗೆ ಅಸಮಾಧಾನ ಹೊರ ಹಾಕಿದರು. ಕಾಮಾಲೆ ಕಣ್ಣಿಗೆ ಕಾಣೋದೆಲ್ಲ ಹಳದಿ. ಏನೇ ಆದ್ರೂ ಕಾಂಗ್ರೆಸ್ ಕಾರಣ ಅಂತಾರೆ. ಅಲ್ತಾಪ್ ಘಟನೆಯಲ್ಲಿ ಗಾಯಾಳುಗಳಿಗೆ ಸಹಾಯ ಮಾಡಿದ್ದಾರೆ. ಯಾರೇ ಇದ್ರೂ ಒದ್ದು ಒಳಗೆ ಹಾಕಲಿ. ನಾನು ಕೂಡ ಕಮಿಷನರ್ ಅವರನ್ನ ಭೇಟಿ ಮಾಡಿದ್ದೇನೆ. ಹುಬ್ಬಳ್ಳಿ ಘಟನೆಗೆ ಕಾಂಗ್ರೆಸ್ ಕಾರಣ ಎಂದು ಕೇವಲ ಬಿಜೆಪಿ ನಾಯಕರು ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.