ಕರ್ನಾಟಕ

karnataka

ETV Bharat / state

ಉಪಚುನಾವಣೆ ಗೆಲುವು ಮುಖ್ಯ, ಅಭ್ಯರ್ಥಿ ಆಯ್ಕೆ ಅಲ್ಲ : ಡಿ ಕೆ ಶಿವಕುಮಾರ್ - ಡಿಕೆ ಶಿವಕುಮಾರ್ ಹೇಳಿಕೆ

ಜೆಡಿಎಸ್‌ನವರು ಮುಸ್ಲಿಂ ಅಭ್ಯರ್ಥಿ ಹಾಕಿ ಕಾಂಗ್ರೆಸ್ ಸೋಲಿಸುವ ಕೆಲಸ ಮಾಡ್ತಿದ್ದಾರೆ. ಬಸವಕಲ್ಯಾಣದಲ್ಲಿ ಅದನ್ನೇ ಮಾಡಿದ್ರು. ಮುಸ್ಲಿಮರ ಬಗ್ಗೆ ಕಾಳಜಿ ಇದ್ರೆ ಸಂಪುಟದಲ್ಲಿ ಯಾಕೆ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ. ಮಂಡ್ಯ, ಮೈಸೂರಿನಲ್ಲಿ ಅಲ್ಪಸಂಖ್ಯಾತರಿಗೆ ಯಾಕೆ ಟಿಕೆಟ್ ಕೊಡಲ್ಲ. ಬಿಜೆಪಿಗೆ ಅನುಕೂಲ ಮಾಡಕ್ಕೆ ಉತ್ತರ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕ್ತಾರೆ..

ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

By

Published : Oct 2, 2021, 3:34 PM IST

ಬೆಂಗಳೂರು :ವಿಧಾನಸಭೆ ಉಪ ಚುನಾವಣೆಯಲ್ಲಿ ನಮಗೆ ಅಭ್ಯರ್ಥಿಗಳು ಮುಖ್ಯವಲ್ಲ, ಗೆಲುವು ಮುಖ್ಯವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎರಡು ಕ್ಷೇತ್ರದ ಚುನಾವಣೆ ಅಭ್ಯರ್ಥಿಗಳ ಬಗ್ಗೆ ಜಿಲ್ಲಾ ಮುಖಂಡರ ಜೊತೆಗೆ ಅಭಿಪ್ರಾಯ ಪಡೆದಿದ್ದೇವೆ. ಹೈಕಮಾಂಡ್​ಗೆ ಮಾಹಿತಿ ನೀಡಿದ್ದೇವೆ. ಯಾರೇ ಕ್ಯಾಂಡಿಡೇಟ್ ಆದ್ರೂ, ಸದ್ಯಕ್ಕೆ ನಮಗೆ ಅದು ಮುಖ್ಯವಲ್ಲ. ನಮ್ಮ ನಾಯಕರು ಈಗಾಗಲೇ ಚುನಾವಣೆ ಗೆಲುವಿಗೆ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದರು.

ಬೈ ಎಲೆಕ್ಷನ್‌ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿರುವುದು..

ಅ.4ರಂದು ಸಿಂದಗಿಗೆ ನಾವು ನಮ್ಮ ಪಕ್ಷದ ಮುಖಂಡರು ಭೇಟಿ ಕೊಡ್ತೀವಿ. ಅ.7ರಂದು ಹಾನಗಲ್ ಕ್ಷೇತ್ರಕ್ಕೆ ನಮ್ಮೆಲ್ಲ ನಾಯಕರು ಭೇಟಿ ಮಾಡ್ತೀವಿ. ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗ್ತೀವಿ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ, ಎರಡೂ ಸೀಟ್ ಗೆದ್ದೇ ಗೆಲ್ಲುತ್ತೇವೆ ಎಂದರು.

ದಲಿತರು ಸಿಎಂ ಆಗಬಹುದು ಎಂಬ ಪರಮೇಶ್ವರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನೀವು‌ ಆಸೆ ಪಡಬಹುದು, ಎಲ್ಲರೂ ಆಸೆ ಪಡಬಹುದು. ಅದೆಲ್ಲಾ ಪಾರ್ಟಿ ತೀರ್ಮಾನ ಮಾಡುತ್ತೆ. ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲ್ಸ ಮಾಡಿದ್ದಾರೆ. ಅವರಿಗೆ ಎಲ್ಲವೂ ಅನುಭವ ಇದೆ. ಅವರಿಗೆ ಏನ್ ಮಾತಾಡ್ಬೇಕು ಮಾತಾಡ್ಬಾರ್ದು ಅಂತಾ ಗೊತ್ತಿದೆ. ಮೊದಲು ಪಕ್ಷ ಅಧಿಕಾರಕ್ಕೆ ತರಬೇಕು ಎಂದು ಹೇಳಿದರು.

ಜೆಡಿಎಸ್ ಬೈ ಎಲೆಕ್ಷನ್ ಅಲ್ಪಸಂಖ್ಯಾತ ಅಭ್ಯರ್ಥಿ ಘೋಷಣೆ ಮಾಡಿದ ವಿಚಾರವಾಗಿ, ಅವರದ್ದು ಪೊಲಿಟಿಕಲ್ ಪಾರ್ಟಿ. ಅವರು ಪೊಲಿಟಿಕಲ್ ಸ್ಟ್ಯಾಟರ್ಜಿ‌ ಮಾಡಿದ್ದಾರೆ. ನ್ಯಾವ್ಯಾಕೆ ಅದರ ಬಗ್ಗೆ ಮಾತನಾಡಬೇಕು ಎಂದರು.

ಇಬ್ಬರೂ ಒಪ್ಪಿದ್ದಾರೆ : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಹಾನಗಲ್ ಉಪಚುನಾವಣೆ ಬಗ್ಗೆ ಹಾವೇರಿ ಜಿಲ್ಲೆಯ ಮುಖಂಡರ ಜತೆ ಚರ್ಚೆ ಮಾಡಿದ್ದೇವೆ. ಮನೋಹರ್ ತಹಶೀಲ್ದಾರ್ ಮತ್ತು ಶ್ರೀನಿವಾಸ ಮಾನೆ ಇಬ್ಬರು ಆಕಾಂಕ್ಷಿಗಳು ಇದ್ರು.

ಇಬ್ಬರ ನಡುವೆ ಸ್ಪರ್ಧೆ ಇದೆ. ಎಲ್ಲರ ಅಭಿಪ್ರಾಯ ಕೇಳಿದ್ದೇವೆ. ನಾವು ಯಾರಿಗೆ ಕೊಟ್ರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದೇವೆ. ಇಬ್ಬರೂ ಇದಕ್ಕೆ ಒಪ್ಪಿಕೊಂಡಿದ್ದಾರೆ. ಎರಡು ಮೂರು ದಿನಗಳಲ್ಲಿ ಹೈಕಮಾಂಡ್ ಅಂತಿಮ ನಿರ್ಧಾರ ಮಾಡುತ್ತೆ ಎಂದರು.

ಪರಮೇಶ್ವರ್ ದಲಿತ ಸಿಎಂ ಅಸ್ತ್ರ ವಿಚಾರ ಬಗ್ಗೆ ನಾನು ಏನು ಮಾತನಾಡಲ್ಲ. ಹೈಕಮಾಂಡ್ ಏನು ನಿರ್ಧಾರ ಮಾಡುತ್ತೋ ಅದಕ್ಕೆ ಬದ್ಧ. ನನ್ನ ಬಗ್ಗೆ ಮತ್ತು ಜೆಡಿಎಸ್ ಬಗ್ಗೆ ಮಾತನಾಡಬೇಡಿ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರ ಕುರಿತು ಮಾತನಾಡಿ, ಇಂತಹ ಎಚ್ಚರಿಕೆ ಬಹಳ ನೋಡಿದ್ದೇನೆ. ನಾನು ಕುಮಾರಸ್ವಾಮಿ ಹೇಳಿಕೆಗೆ ರಿಯಾಕ್ಟ್ ಮಾಡಬಾರದು ಎಂದುಕೊಂಡಿದ್ದೇನೆ ಎಂದರು.

ಜೆಡಿಎಸ್‌ನವರು ಮುಸ್ಲಿಂ ಅಭ್ಯರ್ಥಿ ಹಾಕಿ ಕಾಂಗ್ರೆಸ್ ಸೋಲಿಸುವ ಕೆಲಸ ಮಾಡ್ತಿದ್ದಾರೆ. ಬಸವಕಲ್ಯಾಣದಲ್ಲಿ ಅದನ್ನೇ ಮಾಡಿದ್ರು. ಮುಸ್ಲಿಮರ ಬಗ್ಗೆ ಕಾಳಜಿ ಇದ್ರೆ ಸಂಪುಟದಲ್ಲಿ ಯಾಕೆ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ. ಮಂಡ್ಯ, ಮೈಸೂರಿನಲ್ಲಿ ಅಲ್ಪಸಂಖ್ಯಾತರಿಗೆ ಯಾಕೆ ಟಿಕೆಟ್ ಕೊಡಲ್ಲ. ಬಿಜೆಪಿಗೆ ಅನುಕೂಲ ಮಾಡಕ್ಕೆ ಉತ್ತರ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕ್ತಾರೆ ಎಂದು ಹೇಳಿದರು.

ABOUT THE AUTHOR

...view details