ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ : ಕಾರ್ಯಕರ್ತರ ಜೊತೆ ಡಿಕೆಶಿ ಜೂಮ್ ಮೀಟಿಂಗ್ - ಕಾರ್ಯಕರ್ತರ ಜೊತೆ ಜೂಮ್ ಮೀಟಿಂಗ್ ನಡೆಸಿದ ಡಿಕೆಶಿ

ಕಾಂಗ್ರೆಸ್‌ನ ನಾನಾ ಘಟಕಗಳ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು, ಶಾಸಕರು, ಮಾಜಿ ಶಾಸಕರು ಮತ್ತಿತರ ಮುಖಂಡರ ಜತೆ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಭೆ ನಡೆಸಿದರು..

ಕಾರ್ಯಕರ್ತರ ಜೊತೆ ಜೂಮ್ ಮೀಟಿಂಗ್ ನಡೆಸಿದ ಡಿಕೆಶಿ
ಕಾರ್ಯಕರ್ತರ ಜೊತೆ ಜೂಮ್ ಮೀಟಿಂಗ್ ನಡೆಸಿದ ಡಿಕೆಶಿ

By

Published : Jan 22, 2022, 4:39 PM IST

ಬೆಂಗಳೂರು : ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಇಂದು ಜೂಮ್ ಮೂಲಕ ವಿಡಿಯೋ ಸಂವಾದ ನಡೆಸಿದರು.

ಕಾಂಗ್ರೆಸ್ ನಾನಾ ಘಟಕಗಳ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು, ಶಾಸಕರು, ಮಾಜಿ ಶಾಸಕರು ಮತ್ತಿತರ ಮುಖಂಡರ ಜತೆ ಕೆಪಿಸಿಸಿ ಕಚೇರಿಯಲ್ಲಿ ದಿನವಿಡೀ ಸಭೆ ನಡೆದಿದೆ. ಎಐಸಿಸಿ ಸದಸ್ಯತ್ವ ನೋಂದಣಿ ಉಸ್ತುವಾರಿ ಕೆ. ರಾಜು, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ರಾಮಲಿಂಗಾರೆಡ್ಡಿ, ಆರ್‌ ಧೃವನಾರಾಯಣ್, ಕೆಪಿಸಿಸಿ ಡಿಜಿಟಲ್ ಸದಸ್ಯತ್ವ ನೋಂದಣಿ ಸಂಚಾಲಕ ರಘುನಂದನ್ ರಾಮಣ್ಣ, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮತ್ತಿತರರು ಭಾಗವಹಿಸಿದ್ದರು.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರೂ ಸದಸ್ಯತ್ವ ನೋಂದಣಿ ಅಭಿಯಾನ ಕುರಿತ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬೆಳಗ್ಗೆ 11ಕ್ಕೆ ಆರಂಭವಾದ ಸಭೆಯಲ್ಲಿ ಮೊದಲು ಪ್ರದೇಶ ಮಹಿಳಾ ಕಾಂಗ್ರೆಸ್‌ ರಾಜ್ಯ, ಜಿಲ್ಲಾ ಮತ್ತು ಬ್ಲಾಕ್‌ಗಳ ಅಧ್ಯಕ್ಷರುಗಳು, ಸ್ತ್ರೀಶಕ್ತಿ ಸಂಘಟನಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳು, ಜಿಲ್ಲಾ ಮತ್ತು ತಾಪಂಗಳ ಚುನಾಯಿತ ಮಹಿಳಾ ಸದಸ್ಯರುಗಳು ಹಾಗೂ ನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ಗಳ ಚುನಾಯಿತ ಮಹಿಳಾ ಸದಸ್ಯರುಗಳು ಮತ್ತು ಬಿಬಿಎಂಪಿ ಮಾಜಿ ಸದಸ್ಯರು ಭಾಗವಹಿಸಿದ್ದರು.

ಮಧ್ಯಾಹ್ನ 12 ರಿಂದ 1.30ರ ನಡುವೆ ನಡೆದ ಸಭೆಯಲ್ಲಿ ಮಂಡ್ಯ, ಮೈಸೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಸಂಸದರು, ಮಾಜಿ ಸಂಸದರು, 2019ರ ಲೋಕಸಭಾ ಅಭ್ಯರ್ಥಿಗಳು ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಮಾಜಿ ವಿಧಾನ ಪರಿಷತ್ ಸದಸ್ಯರು, 2018ರ ವಿಧಾನಸಭಾ ಅಭ್ಯರ್ಥಿಗಳು, ಕೆಪಿಸಿಸಿ ಮಾಜಿ ಪದಾಧಿಕಾರಿಗಳು ಹಾಗೂ ವಿಧಾನ ಸಭಾ ಕ್ಷೇತ್ರವಾರು ನಿಯೋಜಿತ ಕೋ-ಆರ್ಡಿನೇಟರ್ಗಳು ಭಾಗವಹಿಸಿದ್ದರು.

ಜಾಹಿರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಮಧ್ಯಾಹ್ನ 2 ರಿಂದ 3.30ರವರೆಗೆ ನಡೆದ ಸಭೆಯಲ್ಲಿ ಹಾವೇರಿ, ಗದಗ, ಹುಬ್ಬಳ್ಳಿ-ಧಾರವಾಡ ನಗರ ಧಾರವಾಡ ಗ್ರಾಮಾಂತರ, ಬೆಳಗಾವಿ ಗ್ರಾಮಾಂತರ, ಚಿಕ್ಕೋಡಿ, ವಿಜಯಪುರ, ನಗರ ಮತ್ತು - ಮತ್ತು ಗ್ರಾಮಾಂತರ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ ನಗರ ಮತ್ತು ಬೀದರ್ ಜಿಲ್ಲೆಗಳ ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಸಂಸದರು, ಮಾಜಿ ಸಂಸದರು, 2019ರ ಲೋಕಸಭಾ ಅಭ್ಯರ್ಥಿಗಳು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಮಾಜಿ ವಿಧಾನ ಪರಿಷತ್ ಸದಸ್ಯರು, 2018ರ ವಿಧಾನಸಭಾ ಅಭ್ಯರ್ಥಿಗಳು, ಕೆಪಿಸಿಸಿ ಮಾಜಿ ಪದಾಧಿಕಾರಿಗಳು ಹಾಗೂ ವಿಧಾನ ಸಭಾ ಕ್ಷೇತ್ರವಾರು ನಿಯೋಜಿತ ಕೋ-ಆರ್ಡಿನೇಟರ್ಗಳು ಪಾಲ್ಗೊಂಡಿದ್ದರು.

ABOUT THE AUTHOR

...view details