ಕರ್ನಾಟಕ

karnataka

ETV Bharat / state

ಬೂಟಾ ಸಿಂಗ್ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ - ಬೂಟಾ ಸಿಂಗ್ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

ಕೇಂದ್ರದ ಮಾಜಿ ಸಚಿವ ಹಾಗೂ ಪಶ್ಚಿಮ ಬಂಗಾಳದ ರಾಜ್ಯಪಾಲರೂ ಆಗಿದ್ದ ಬೂಟಾ ಸಿಂಗ್​ ಇಂದು ನಿಧನ ಹೊಂದಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​ ಸಂತಾಪ ಸೂಚಿಸಿದ್ದಾರೆ.

FIle Photo
ಸಂಗ್ರಹ ಚಿತ್ರ

By

Published : Jan 2, 2021, 3:13 PM IST

ಬೆಂಗಳೂರು: ಬೂಟಾ ಸಿಂಗ್ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಇಂದಿರಾಗಾಂಧಿ ಅವರ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಅವರು ಓರ್ವ ಅನುಭವಿ ರಾಜಕಾರಣಿ. ಬಡವರು ಮತ್ತು ದೀನದಲಿತರ ಧ್ವನಿಯಾಗಿ ಅವರ ಕಲ್ಯಾಣಕ್ಕೆ ಶ್ರಮಿಸಿದ್ದು ಅಪಾರ ಅಭಿಮಾನಿ ಬಳಗ ಹೊಂದಿದ್ದರು ಎಂದು ಡಿಕೆಶಿ ಸಂತಾಪ ಸೂಚಿಸಿದ್ದಾರೆ.

ಸಿಂಗ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರು, ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಶೋಕ ನುಡಿಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details