ಕರ್ನಾಟಕ

karnataka

ETV Bharat / state

ನಗರದ ವಿವಿಧೆಡೆ ಬಡವರಿಗೆ ಆಹಾರದ ಕಿಟ್ ವಿತರಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ - ಕಾಂಗ್ರೆಸ್​ ನಾಯಕರಿಂದ ಫುಡ್​ ಕಿಟ್ ವಿತರಣೆ

ಕೆಪಿಸಿಸಿ ಕಚೇರಿಗೆ ತೆರಳಿ ಸಭೆಯಲ್ಲಿ ಭಾಗವಹಿಸಿದ ಅವರು ಮಧ್ಯಾಹ್ನದ ನಂತರ ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಮಾಜಿ ಸಚಿವ ಆರ್.ವಿ. ದೇವರಾಜ್ ಆಯೋಜಿಸಿದ್ದ ಬಡವರಿಗೆ ಆಹಾರ ಮತ್ತು ಮೆಡಿಕಲ್ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ಶಾಸಕ ಜಮೀರ್ ಅಹಮದ್, ಮಾಜಿ ಸಚಿವ ಎಚ್.ಎಂ. ರೇವಣ್ಣ, ಹಿರಿಯ ಮುಖಂಡ ಕೆ.ಎಂ. ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

ಆಹಾರದ ಕಿಟ್ ವಿತರಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ
ಆಹಾರದ ಕಿಟ್ ವಿತರಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ

By

Published : Jun 3, 2021, 1:06 AM IST

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು ನಗರದ ವಿವಿಧ ಕಡೆಗಳಲ್ಲಿ ಬಡವರಿಗೆ ಆಹಾರದ ಕಿಟ್ ವಿತರಿಸಿದರು.

ಬಸವನಗುಡಿ ಚಿಕ್ಕಪೇಟೆ ಹಾಗೂ ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಮುಖಂಡರು ಸಮಾರಂಭದಲ್ಲಿ ಆಹಾರದ ಕಿಟ್​ಗಳನ್ನು ನೂರಾರು ಮಂದಿಗೆ ವಿತರಿಸಿದರು. ಮೊದಲು ಬಸವನಗುಡಿಗೆ ತೆರಳಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಲ್ಲಿನ ರಾಮರಾವ್ ಆಟದ ಮೈದಾನದಲ್ಲಿ ಬಡವರಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಾಧ್ಯಕ್ಷ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್, ಮಾಜಿ ಶಾಸಕ ಕೆ. ಚಂದ್ರಶೇಖರ್, ಹಿರಿಯ ಮುಖಂಡ ಕೆ.ಎಂ. ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

ಇದಾದ ಬಳಿಕ ಕೆಪಿಸಿಸಿ ಕಚೇರಿಗೆ ತೆರಳಿ ಸಭೆಯಲ್ಲಿ ಭಾಗವಹಿಸಿದ ಅವರು ಮಧ್ಯಾಹ್ನದ ನಂತರ ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಮಾಜಿ ಸಚಿವ ಆರ್.ವಿ. ದೇವರಾಜ್ ಆಯೋಜಿಸಿದ್ದ ಬಡವರಿಗೆ ಆಹಾರ ಮತ್ತು ಮೆಡಿಕಲ್ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ಶಾಸಕ ಜಮೀರ್ ಅಹಮದ್, ಮಾಜಿ ಸಚಿವ ಎಚ್.ಎಂ. ರೇವಣ್ಣ, ಹಿರಿಯ ಮುಖಂಡ ಕೆ.ಎಂ. ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

ಸಂಜೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಜರಗನಹಳ್ಳಿಯಲ್ಲಿಗೆ ತೆರಳಿ ಆಹಾರ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇಲ್ಲಿ ಹಲವು ಸ್ಥಳೀಯ ನಾಯಕರು ಇವರಿಗೆ ಸಾಥ್ ನೀಡಿದರು.

ಇದನ್ನು ಓದಿ:ಕೋವಿಡ್ ನಿಯಮ ಉಲ್ಲಂಘನೆ ಆರೋಪ: ಡಿಕೆಶಿ​​ಗೆ 10 ಸಾವಿರ ರೂ. ದಂಡ!

ABOUT THE AUTHOR

...view details