ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಸದಾಶಿವನಗರದ ನಿವಾಸದಲ್ಲಿ ಬೆಂಗಳೂರಿನ ಮುಸ್ಲಿಂ ಮುಖಂಡರ ಸಭೆ ಕರೆದಿದ್ದಾರೆ. ಸಭೆಯಲ್ಲಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಮಾಜಿ ಸಚಿವ ಸಿಎಂ ಇಬ್ರಾಹಿಂ, ಜಮೀರ್ ಅಹಮದ್ ಖಾನ್, ಎನ್ ಎ ಹ್ಯಾರಿಸ್, ವಿಧಾನ ಪರಿಷತ್ ಸದಸ್ಯ ನಜೀರ್, ಮತ್ತಿತರ ಮುಖಂಡರು ಭಾಗವಹಿಸಿದ್ದಾರೆ.
ಪಾದರಾಯನಪುರ ಗಲಾಟೆ ಪ್ರಕರಣ: ಮುಸ್ಲಿಂ ಮುಖಂಡರ ಸಭೆ ಕರೆದ ಡಿಕೆಶಿ
ನಿನ್ನೆ ರಾತ್ರಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾದರಾಯನಪುರದಲ್ಲಿ ನಡೆದ ಗಲಾಟೆಯ ಬಗ್ಗೆ ಮಾಹಿತಿ ಪಡೆಯಲು ಹಾಗೂ ಅಲ್ಪಸಂಖ್ಯಾತ ಸಮುದಾಯಕ್ಕೆ ಪಕ್ಷದ ಕಡೆಯಿಂದ ಸೂಕ್ತ ಸಂದೇಶ ತಲುಪಿಸುವ ನಿಟ್ಟಿನಲ್ಲಿ ಚರ್ಚಿಸಲು ಡಿಕೆಶಿ ಮುಸ್ಲಿಂ ಮುಖಂಡರ ಸಭೆ ಕರೆದಿದ್ದಾರೆ.
ನಿನ್ನೆ ರಾತ್ರಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾದರಾಯನಪುರದಲ್ಲಿ ನಡೆದ ಗಲಾಟೆಯ ಬಗ್ಗೆ ಮಾಹಿತಿ ಪಡೆಯಲು ಹಾಗೂ ಅಲ್ಪಸಂಖ್ಯಾತ ಸಮುದಾಯಕ್ಕೆ ಪಕ್ಷದ ಕಡೆಯಿಂದ ಸೂಕ್ತ ಸಂದೇಶ ತಲುಪಿಸುವ ನಿಟ್ಟಿನಲ್ಲಿ ಚರ್ಚಿಸಲು ಡಿಕೆಶಿ ಈ ಸಭೆ ಕರೆದಿದ್ದಾರೆ ಎನ್ನಲಾಗಿದೆ.
ಆರಂಭದಿಂದಲೂ ಕೊರೊನಾ ಮಹಾಮಾರಿ ವ್ಯಾಪಿಸಲು ಅಲ್ಪಸಂಖ್ಯಾತರು ಕಾರಣ ಎಂದು ಕೆಲವರು ಬಿಂಬಿಸಲು ಹೊರಟಿದ್ದಾರೆ. ಇದು ಸರಿಯಲ್ಲ ಎಂದು ಹೇಳುತ್ತಾ ಬಂದಿದ್ದ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಆಗುವ ರೀತಿ ನಿನ್ನೆ ಪಾದರಾಯನಪುರದಲ್ಲಿ ಘಟನೆ ನಡೆದಿದೆ. ಇದುವರೆಗೂ ಸಮರ್ಥಿಸಿಕೊಂಡು ಬಂದವರಿಗೆ ಯಾವ ರೀತಿಯ ಸೂಚನೆ ನೀಡಬೇಕು ಎಂಬ ಕುರಿತು ಕೂಡ ಇಂದು ಶಿವಕುಮಾರ್ ತಮ್ಮ ಮುಖಂಡರ ಜೊತೆ ಚರ್ಚಿಸಿ ನಿರ್ಧರಿಸಲಿದ್ದಾರೆ ಎನ್ನಲಾಗಿದೆ.