ಕರ್ನಾಟಕ

karnataka

ETV Bharat / state

ವರ್ತೂರು ಪ್ರಕಾಶ್​​ಗೂ ಕಾಂಗ್ರೆಸ್​​ಗೂ ಯಾವುದೇ ಸಂಬಂಧವಿಲ್ಲ: ಡಿಕೆಶಿ - ಗ್ರಾಮ ಪಂಚಾಯಿತಿ ಚುನಾವಣೆ

ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ವರ್ತೂರು ಪ್ರಕಾಶ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ನಮ್ಮ ಪಕ್ಷ ಹಾಗೂ ಪಕ್ಷದ ನಾಯಕರ ಹೆಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಡಿಕೆಶಿ ದೂರಿದ್ದಾರೆ.

kpcc-president-dk-sivakumar-talk-about-varthur-prakash-news
ಡಿಕೆಶಿ ಸ್ಪಷ್ಟನೆ

By

Published : Dec 8, 2020, 10:28 PM IST

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ವರ್ತೂರು ಪ್ರಕಾಶ್ ಅವರು ಈ ಕ್ಷಣದವರೆಗೂ ನನ್ನನ್ನು ಭೇಟಿ ಮಾಡಿಲ್ಲ. ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ವರ್ತೂರು ಪ್ರಕಾಶ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ನಮ್ಮ ಪಕ್ಷ ಹಾಗೂ ಪಕ್ಷದ ನಾಯಕರ ಹೆಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.

ವರ್ತೂರು ಪ್ರಕಾಶ್ ಅವರು ಮುಂದಿನ ದಿನಗಳಲ್ಲಿ ಇದೇ ರೀತಿಯ ಕುತಂತ್ರ, ಅಪಪ್ರಚಾರ ಮುಂದುವರೆಸಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಡಿಕೆಶಿ ಎಚ್ಚರಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರು ಗಲಭೆ.. ಜಾಮೀನು ಕೋರಿ ಹೈಕೋರ್ಟ್​ಗೆ ಸಂಪತ್ ರಾಜ್ ಅರ್ಜಿ

ABOUT THE AUTHOR

...view details