ಕರ್ನಾಟಕ

karnataka

ETV Bharat / state

ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯತ್​ಗಳಲ್ಲಿ ಆಸ್ತಿ ತೆರಿಗೆ ಮನ್ನಾ ಮಾಡಿ: ಡಿಕೆಶಿ - waive property tax

ಒಂದು ವರ್ಷದ ಅವಧಿಗೆ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್​ಗಳಲ್ಲಿ ಎಲ್ಲಾ ಆಸ್ತಿ ತೆರಿಗೆಯನ್ನು ಮನ್ನಾ ಮಾಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

DK Sivakumar tweet
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

By

Published : Jul 22, 2020, 3:15 PM IST

ಬೆಂಗಳೂರು: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಜನರ ಸಹಾಯಕ್ಕೆ ಸರ್ಕಾರ ಬರಬೇಕೆಂದು ಆಗ್ರಹಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇದೀಗ ಸರ್ಕಾರ ಆಸ್ತಿ ತೆರಿಗೆ ಮನ್ನಾ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಟ್ವೀಟ್ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಆಗ್ರಹಿಸಿರುವ ಅವರು, ಕೊರೊನಾ ಸಾಂಕ್ರಾಮಿಕ ರೋಗದ ಪರಿಣಾಮ ನಾಗರಿಕರು ಭಾರೀ ಆರ್ಥಿಕ ಹಾನಿಯನ್ನು ಅನುಭವಿಸುತ್ತಿದ್ದಾರೆ. ನಾಗರಿಕರ ಮೇಲಿನ ಆರ್ಥಿಕ ಹೊರೆ ಕಡಿಮೆ ಮಾಡುವುದು ಸರ್ಕಾರದ ಜವಬ್ದಾರಿಯಾಗಿದೆ. ಆದ್ದರಿಂದ ಮಾನವೀಯ ನೆಲೆಯಲ್ಲಿ ಒಂದು ವರ್ಷದ ಅವಧಿಗೆ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್​ಗಳಲ್ಲಿ ಎಲ್ಲಾ ಆಸ್ತಿ ತೆರಿಗೆಯನ್ನು ಮನ್ನಾ ಮಾಡಬೇಕೆಂದು ಸಿಎಂ ಬಿಎಸ್‌ವೈ ಅವರನ್ನು ಕೋರಿದ್ದಾರೆ.

ಕೊರೊನಾ ಆತಂಕ ರಾಜ್ಯದಲ್ಲಿ ಹೆಚ್ಚಾಗಿರುವ ಸಂದರ್ಭ ರಾಜ್ಯ ಸರ್ಕಾರ ಜನ ಹಿತ ಕಾಪಾಡಲು ಕೈಗೊಳ್ಳಬಹುದಾದ ಕ್ರಮಗಳ ಕುರಿತು ನಿರಂತರವಾಗಿ ಎಚ್ಚರಿಕೆ ನೀಡುತ್ತಾ ಬಂದಿರುವೆ. ಪ್ರತಿಪಕ್ಷವಾಗಿ ಕಾಂಗ್ರೆಸ್ ತನ್ನ ಜವಾಬ್ದಾರಿ ನಿಭಾಯಿಸುತ್ತ ಬಂದಿದೆ. ಆದರೆ ಸರ್ಕಾರವೇ ನಮ್ಮ ಸಲಹೆಯನ್ನು ಸ್ವೀಕರಿಸುತ್ತಿಲ್ಲ ಎಂದು ಡಿ ಕೆ ಶಿವಕುಮಾರ್​ ಬೇಸರ ವ್ಯಕ್ತಪಡಿಸಿದ್ದಾರೆ.

ನಿನ್ನೆ ಕೂಡ ನೆಲಮಂಗಲದಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಡಿಕೆಶಿ ಆಲಿಸಿದ್ದಾರೆ.

ABOUT THE AUTHOR

...view details