ಕರ್ನಾಟಕ

karnataka

ETV Bharat / state

ವಕೀಲರಿಗೆ 25 ಕೋಟಿ ರೂ. ನೆರವು ನೀಡುವಂತೆ ರಾಜ್ಯ ಸರ್ಕಾರಕ್ಕೆ ಡಿಕೆಶಿ ಪತ್ರ

ಲಾಕ್‌ಡೌನ್ ಬಳಿಕ ಕೆಲಸ ಮತ್ತು ಸಂಪಾದನೆ ಇಲ್ಲದೆ ವಕೀಲರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ಆರ್ಥಿಕ ನೆರವನ್ನು ಕೂಡಲೇ ಬಿಡುಗಡೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಿಎಂ ಯಡಿಯೂರಪ್ಪ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಸರ್ಕಾರಕ್ಕೆ ಡಿಕೆಶಿ ಪತ್ರ
ಸರ್ಕಾರಕ್ಕೆ ಡಿಕೆಶಿ ಪತ್ರ

By

Published : May 30, 2020, 11:02 PM IST

ಬೆಂಗಳೂರು: ಲಾಕ್‌ಡೌನ್ ಬಳಿಕ ಸಂಕಷ್ಟಕ್ಕೆ ಸಿಲುಕಿರುವ ವಕೀಲರಿಗೆ ಆರ್ಥಿಕ ನೆರವು ನೀಡಲು 25 ಕೋಟಿ ರೂ. ಬಿಡುಗಡೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸರ್ಕಾರಕ್ಕೆ ಮನವಿ ಪತ್ರ ಬರೆದಿದ್ದಾರೆ.

ಕೊರೊನಾ ವೈರಸ್ ನಿಯಂತ್ರಣ ಮಾಡಲು ಲಾಕ್‌ಡೌನ್ ಜಾರಿಯ ಬಳಿಕ ಕೋರ್ಟ್ ಕಲಾಪಗಳು ಸ್ಥಗಿತಗೊಂಡಿವೆ. ರಾಜ್ಯದಲ್ಲಿ 1.05 ಲಕ್ಷ ವಕೀಲರು ಕಾರ್ಯನಿರತರಾಗಿದ್ದಾರೆ. ಇವರಲ್ಲಿ ಸಾಕಷ್ಟು ವಕೀಲರು ಪೂರ್ಣ ಪ್ರಮಾಣದಲ್ಲಿ ತಮ್ಮ ವೃತ್ತಿಯನ್ನೇ ನಂಬಿ ಬದುಕುತ್ತಿದ್ದಾರೆ. ಲಾಕ್‌ಡೌನ್ ಬಳಿಕ ಕೆಲಸ ಮತ್ತು ಸಂಪಾದನೆ ಇಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಕೀಲರು ನೆರವು ಕೋರಿ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆದು ಮನವಿ ಮಾಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ವಕೀಲರಿಗೆ ನೆರವು ನೀಡಲು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿಗೆ 25 ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ABOUT THE AUTHOR

...view details