ಬೆಂಗಳೂರು:ಸಿಎಂ. ಬಿ.ಎಸ್. ಯಡಿಯೂರಪ್ಪ ಹುಟ್ಟುಹಬ್ಬ ಸಮಾರಂಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜನ್ಮದಿನಕ್ಕೆ ವಿಧಾನಸಭೆ ಪ್ರತಿಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಬಂದಿದ್ದಕ್ಕೆ ಕಾಂಗ್ರೆಸ್‌ನೊಳಗೆ ಯಾವುದೇ ಅಸಮಾಧಾನವಿಲ್ಲ. ರಾಜಕೀಯ ಬೇರೆ, ಮನುಷ್ಯ ಸಂಬಂಧಗಳು ಬೇರೆ ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಹಾಗಾಗಿ, ಇದರ ಬಗ್ಗೆ ಯಾರಿಂದಲೂ ಅಪಸ್ವರವಿಲ್ಲ. ಇದೆಲ್ಲಾ ಸುಳ್ಳು ಸುದ್ದಿ ಎಂದು ಹೇಳಿದ್ದಾರೆ.