ಕರ್ನಾಟಕ

karnataka

ETV Bharat / state

ಕೊರೊನಾ ತಡೆಗಟ್ಟುವಲ್ಲಿ ಸರ್ಕಾರ ವಿಫಲ ಆರೋಪ: ಈಶ್ವರ್​ ಖಂಡ್ರೆ ಆಕ್ರೋಶ - ಕೆಆರ್ ಪುರ ಕ್ಷೇತ್ರ

ಕೊರೊನಾ ಸೋಂಕು ಹರಡುವುದನ್ನು ತಡೆಯುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅಷ್ಟೇ ಅಲ್ಲದೆ ಸೂಕ್ತ ಚಿಕಿತ್ಸಾ ಕ್ರಮಗಳನ್ನು ಕೈಗೊಳ್ಳುವಲ್ಲಿಯೂ ಸರ್ಕಾರ ಎಡವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ದೂರಿದರು.

ಆರೋಗ್ಯ ಹಸ್ತ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಆರೋಗ್ಯ ಹಸ್ತ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

By

Published : Aug 12, 2020, 10:46 AM IST

ಬೆಂಗಳೂರು: ಕೊರೊನಾ ತಡೆಗಟ್ಟುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದರು.

ಕೆ.ಆರ್.ಪುರ ಕ್ಷೇತ್ರದಲ್ಲಿ ಆರೋಗ್ಯ ಹಸ್ತ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಕೊರೊನಾ ಸೋಂಕು ಹರಡುವುದನ್ನು ತಡೆಯುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅಷ್ಟೇ ಅಲ್ಲದೆ ಸೂಕ್ತ ಚಿಕಿತ್ಸಾ ಕ್ರಮಗಳನ್ನು ಕೈಗೊಳ್ಳುವಲ್ಲಿಯೂ ಸರ್ಕಾರ ಎಡವಿದೆ ಎಂದರು.

ಆರೋಗ್ಯ ಹಸ್ತ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಸಹಾಯ ಹಸ್ತದ ಮೂಲಕ ಪಕ್ಷದ ವಾರಿಯರ್​ಗಳು ಕಾರ್ಯನಿರ್ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಕೊರೊನಾ ವೈರಸ್​ಗೆ ಭಯ ಪಡುವ ಅಗತ್ಯವಿಲ್ಲ. ಮಾನಸಿಕ ಸ್ಥೈರ್ಯವೇ ಈ ರೋಗಕ್ಕೆ ಮದ್ದು ಎಂದು ಜನತೆಗೆ ಧೈರ್ಯ ತುಂಬಿದರು.

ABOUT THE AUTHOR

...view details