ಬೆಂಗಳೂರು:ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಬಗೆದಷ್ಟು ಹೊಸ ಆಯಾಮಗಳು ಹುಟ್ಟಿಕೊಳ್ಳುತ್ತಿರುವ ಸಂದರ್ಭದಲ್ಲಿ, ಬೆಳಗಾವಿ ಪ್ಯಾಂಥರ್ಸ್ ಮಾಲೀಕನ ಬಿಡುಗಡೆಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.
KPL ಫಿಕ್ಸಿಂಗ್: ಪ್ಯಾಂಥರ್ಸ್ ಮಾಲೀಕನ ಬಿಡುಗಡೆಗೆ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ - bangalore news
ಕರ್ನಾಟಕ ಪ್ರೀಮಿಯರ್ ಲೀಗ್ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಬಂಧಿತನಾಗಿದ್ದ ಬೆಳಗಾವಿ ತಂಡದ ಮಾಲೀಕ ಅಶ್ಫಕ್ ಅಲಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.
KPL ಫಿಕ್ಸಿಂಗ್: ಪ್ಯಾಂಥರ್ಸ್ ಮಾಲೀಕನ ಬಿಡುಗಡೆಗೆ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ
ಕರ್ನಾಟಕ ಪ್ರೀಮಿಯರ್ ಲೀಗ್ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಬಂಧಿತನಾಗಿದ್ದ ಬೆಳಗಾವಿ ತಂಡದ ಮಾಲೀಕ ಅಶ್ಫಕ್ ಅಲಿ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನ ಮಂಗಳವಾರ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಪ್ರಕರಣ ತುಂಬಾ ಗಂಭೀರವಾಗಿದ್ದು, ತನಿಖೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ. ಆದ್ದರಿಂದ ಇನ್ನಷ್ಟು ವಿಚಾರಣೆ ನಡೆಸಬೇಕಾಗಿದೆ ಎಂದು ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.