ಬೆಂಗಳೂರು: ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣದ ಕುರಿತು ಬೆಳಗಾವಿ ಪ್ಯಾಂಥರ್ಸ್ ತಂಡದ ಕೋಚ್ ಸುಧೀಂದ್ರ ಶಿಂಧೆಯನ್ನು ಸಿಸಿಬಿ ಅಧಿಕಾರಿಗಳು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಈ ವೇಳೆ ತನಿಖಾಧಿಕಾರಿಗಳು ಹಾಗೂ ನ್ಯಾಯಾಧೀಶರ ಎದುರು ಶಿಂಧೆ ಬಿಕ್ಕಿಬಿಕ್ಕಿ ಅತ್ತಿದ್ದಾರೆ.
ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣ: ನ್ಯಾಯಾಧೀಶರ ಎದುರು ಕಣ್ಣೀರಿಟ್ಟ ಆರೋಪಿ - ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣ
ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣದ ಕುರಿತು ಬೆಳಗಾವಿ ಪ್ಯಾಂಥರ್ಸ್ ತಂಡದ ಕೋಚ್ ಸುಧೀಂದ್ರ ಶಿಂಧೆಯನ್ನು ಸಿಸಿಬಿ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.

ನ್ಯಾಯಾಧೀಶರ ಎದುರು ಕಣ್ಣೀರಿಟ್ಟ ಆರೋಪಿ
ನ್ಯಾಯಾಧೀಶರ ಎದುರು ಕಣ್ಣೀರಿಟ್ಟ ಶಿಂಧೆ
ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ. ನಾನು ಬೆಳಗಾವಿ ಪ್ಯಾಂಥರ್ಸ್ ಮಾಲೀಕ ಅಲಿ ಅಶ್ಫಾಕ್ ಹೇಳಿದ ಹಾಗೆ ನಡೆದುಕೊಂಡಿದ್ದೇನೆ. ಅದು ಬಿಟ್ಟು ಯಾವುದೇ ರೀತಿಯ ಮ್ಯಾಚ್ ಫಿಕ್ಸಿಂಗ್ ದಂಧೆಯಲ್ಲಿ ತೊಡಗಿಲ್ಲ. ಎಲ್ಲದಕ್ಕೂ ಕಾರಣ ಅಲಿ ಅಶ್ಫಾಕ್ ಎಂದು ಶಿಂಧೆ ಕಣ್ಣೀರಿಟ್ಟಿದ್ದಾರೆ.
ಮತ್ತೊಂದೆಡೆ ಪ್ರಕರಣದಲ್ಲಿ ಸಿನಿ ತಾರೆಯರ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಸಿಸಿಬಿ ಅಧಿಕಾರಿಗಳು ಈ ಕುರಿತು ತನಿಖೆ ಮುಂದುವರೆಸಿದ್ದಾರೆ.
Last Updated : Dec 6, 2019, 7:07 PM IST