ಕರ್ನಾಟಕ

karnataka

ETV Bharat / state

ಕೆಪಿಎಸ್​ಸಿ ಮುಖ್ಯ ಪರೀಕ್ಷೆ ಮುಂದೂಡಿಕೆ: ಪರಿಷ್ಕೃತ ವೇಳಾಪಟ್ಟಿ ಪ್ರಕಟ - KPSC Exam Date

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ವು ಮುಖ್ಯ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ. ಪರೀಕ್ಷಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡಿ ಗೊಂದಲಕ್ಕೆ ತೆರೆ ಎಳೆಯಲಾಗಿದೆ.

KPSC Main Exam Postponement
ಸಂಗ್ರಹ ಚಿತ್ರ

By

Published : Nov 19, 2020, 4:16 PM IST

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಮುಖ್ಯ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ. ಉಂಟಾಗಿದ್ದ ಗೊಂದಲಕ್ಕೆ ಇದೀಗ ತೆರೆ ಎಳೆಯಲಾಗಿದೆ.

ಯುಪಿಎಸ್​ಸಿ ಹಾಗೂ ಕೆಪಿಎಸ್​ಸಿ ಮುಖ್ಯ ಪರೀಕ್ಷೆಗಳನ್ನ ಈ ಬಾರಿ ಒಂದೇ ವಾರದಲ್ಲಿ ನಿಗದಿ ಮಾಡಲಾಗಿತ್ತು. ಇದರಿಂದ ಅಭ್ಯರ್ಥಿಗಳಿಗೆ ಒಟ್ಟೊಟ್ಟಿಗೆ ಎರಡು ಮುಖ್ಯ ಪರೀಕ್ಷೆಗಳನ್ನು ಎದುರಿಸಬೇಕಾದ ಅನಿವಾರ್ಯತೆ ಎದುರಾಗಿತ್ತು. ಈ ಎರಡೂ ಪರೀಕ್ಷೆ ನಡುವೆ ಹೆಚ್ಚಿನ ಅಂತರ ಕೂಡ ಇರಲಿಲ್ಲ. ಹೀಗಾಗಿ ಕರ್ನಾಟಕ ಲೋಕಸೇವಾ ಆಯೋಗ ಮುಖ್ಯ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಪರಿಷ್ಕೃತ ವೇಳಾಪಟ್ಟಿ

ಪ್ರಮುಖವಾಗಿ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಸಮೂಹ ಎ ವೃಂದದ ಸಹಾಯಕ ನಿಯಂತ್ರಕ ಹುದ್ದೆಗಳು, ರಾಜ್ಯದ ವಿವಿಧ ಇಲಾಖೆಗಳ ಹುದ್ದೆಗಳು, ರಾಜ್ಯ ಅರಣ್ಯ, ಪರಿಸರ-ಜೀವಿಶಾಸ್ತ್ರ ಇಲಾಖೆಯಲ್ಲಿನ ಸಮೂಹ ಎ ವೃಂದದ ಹುದ್ದೆಗಳು, ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ, ಬಿ ವೃಂದದ ಹುದ್ದೆಗಳ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ.

ABOUT THE AUTHOR

...view details