ಕರ್ನಾಟಕ

karnataka

ETV Bharat / state

ಕೆ.ಆರ್.ಪುರಂ ಅಭ್ಯರ್ಥಿ ಆಯ್ಕೆ ಸಂಬಂಧ ಬಿಎಸ್​ವೈ ನೇತೃತ್ವದಲ್ಲಿ ಸಭೆ: ಅಸಮಾಧಾನ ಸ್ಫೋಟ? - ಕೆ.ಆರ್.ಪುರಂ ಕ್ಷೇತ್ರದ ಉಪ ಚುನಾವಣಾ ಸಿದ್ದತೆ

ಇಂದು ಬಿಜೆಪಿ ಕಚೇರಿಯಲ್ಲಿ ಸಿಎಂ ನೇತೃತ್ವದಲ್ಲಿ ಕೆ.ಆರ್.ಪುರಂ ಕ್ಷೇತ್ರದ ಉಪ ಚುನಾವಣಾ ಸಿದ್ಧತೆ ಮತ್ತೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಭೆ ನಡೆಸಲಾಯಿತು.

meeting

By

Published : Oct 23, 2019, 7:23 PM IST

ಬೆಂಗಳೂರು:ಕೆ.ಆರ್.ಪುರಂ ಟಿಕೆಟ್ ಹಂಚಿಕೆ ವಿಷಯದಲ್ಲಿ ಅಸಮಾಧಾನ‌ ಸ್ಫೋಟಗೊಂಡಿದ್ದು, ಸಭೆಯಿಂದ ದೂರ ಉಳಿಯುವ ಮೂಲಕ ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ನಂದೀಶ್ ರೆಡ್ಡಿ ಬಂಡಾಯದ ಬಾವುಟ ಹಾರಿಸಿದ್ದಾರೆ.

ಕೆ.ಆರ್.ಪುರಂ ಬಿಜೆಪಿ ಉಸ್ತುವಾರಿ ಸಚ್ಚಿದಾನಂದಮೂರ್ತಿ

ಬಿಜೆಪಿ ಕಚೇರಿಯಲ್ಲಿ ಕೆ.ಆರ್.ಪುರಂ ಕ್ಷೇತ್ರದ ಉಪ ಚುನಾವಣಾ ಸಿದ್ಧತೆ ಮತ್ತೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಭೆ ನಡೆಸಲಾಯಿತು. ಸಿಎಂ, ರಾಜ್ಯಾಧ್ಯಕ್ಷ, ಸಂಘಟನಾ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿ ಆಯ್ಕೆ ಸಂಬಂಧ ಅಸಮಾಧಾನ ಸ್ಫೋಟಗೊಂಡಿದೆ. ಟಿಕೆಟ್ ಆಕಾಂಕ್ಷಿಯಾಗಿರುವ ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ನಂದೀಶ್ ರೆಡ್ಡಿ ಸಭೆಗೆ ಗೈರಾಗಿದ್ದು, ಅವರ ಅನುಪಸ್ಥಿತಿಯಲ್ಲಿ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ಪ್ರಮುಖರ ಮನವೊಲಿಸುವ ಯತ್ನವನ್ನು ಸಿಎಂ ನಡೆಸಿದರು. ಅನರ್ಹ ಶಾಸಕ ಬೈರತಿ ಬಸವರಾಜು ಪರ ಕೆಲಸ ಮಾಡಲು ಸಿಎಂ ಸೂಚನೆ ನೀಡಿದರು. ಆದರೆ ಇದಕ್ಕೆ ಸರಿಯಾದ ಸ್ಪಂದನೆ ಸಿಗಲಿಲ್ಲ ಎನ್ನಲಾಗಿದೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಆರ್.ಪುರಂ ಬಿಜೆಪಿ ಉಸ್ತುವಾರಿ ಸಚ್ಚಿದಾನಂದಮೂರ್ತಿ, ಪಕ್ಷ ಅಧಿಕಾರಕ್ಕೆ ಬಂದಿದೆ. ಹಾಗಾಗಿ ಪಕ್ಷದಿಂದ ಯಾರಿಗೆ ಟಿಕೆಟ್ ಕೊಟ್ಟರು ಅವರ ಪರ ಕೆಲಸ ಮಾಡಲಿದ್ದೇವೆ. ಕಳೆದ ಬಾರಿ ಬೇರೆ ಬೇರೆ ಕಾರಣಕ್ಕೆ ಬಿಜೆಪಿ ಸೋತಿತ್ತು. ಈ ಬಾರಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ನಂದೀಶ್ ರೆಡ್ಡಿ ಕುಟುಂಬದೊಂದಿಗೆ ಪ್ರವಾಸದಲ್ಲಿದ್ದಾರೆ. ಹಾಗಾಗಿ ಬಂದಿಲ್ಲ. ಅವರು ಟಿಕೆಟ್​​ಗಾಗಿ ಬ್ಲಾಕ್​​ಮೇಲ್ ತಂತ್ರ ಮಾಡಲ್ಲ. ಅವರು ಕೂಡ ಈಗಾಗಲೇ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡುವ ಭರವಸೆ ನೀಡಿದ್ದಾರೆ. ಪಕ್ಷ ಯಾರಿಗೇ ಟಿಕೆಟ್ ಕೊಟ್ಟರೂ ಪಕ್ಷದ ಅಭ್ಯರ್ಥಿಯ ಪರ ಕೆಲಸ ಮಾಡಿ ಗೆಲ್ಲಿಸುತ್ತೇವೆ ಎಂದರು.

ABOUT THE AUTHOR

...view details