ಕರ್ನಾಟಕ

karnataka

ETV Bharat / state

ಮೈತ್ರಿ ಸರ್ಕಾರ ಉರುಳಿಸಲು ಯತ್ನಿಸುತ್ತಿರುವ ಬಿಜೆಪಿಯನ್ನ ಸೋಲಿಸಿ: ಕೃಷ್ಣ ಬೈರೇಗೌಡ - bjp

ಬಿಜೆಪಿ ಸರ್ಕಾರ ಕೇವಲ ಶ್ರೀಮಂತರು, ಉದ್ಯಮಿಗಳ ಪರ ಕಾರ್ಯನಿರ್ವಹಿಸುತ್ತಿದೆಯೇ ಹೊರತು, ಬಡವರ ಪರವಾಗಿ ಅಲ್ಲ. ರಾಜ್ಯದಲ್ಲಿ ಜನಪರವಾಗಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಉರುಳಿಸಲು ಬಿಜೆಪಿ ನಾಯಕರು ಸಕಲ ರೀತಿಯಲ್ಲಿ ಪ್ರಯತ್ನಿಸುತ್ತಿದ್ದಾರೆ ಎಂದು ಮೈತ್ರಿ ಪಕ್ಷದ ಅಭ್ಯರ್ಥಿ ಕೃಷ್ಣಬೈರೇಗೌಡ ಆರೋಪಿಸಿದರು.

ಮೈತ್ರಿ ಪಕ್ಷದ ಅಭ್ಯರ್ಥಿ ಕೃಷ್ಣಬೈರೇಗೌಡ

By

Published : Apr 5, 2019, 4:13 PM IST

ಬೆಂಗಳೂರು:ರಾಜ್ಯದಲ್ಲಿ ಜನಪರವಾಗಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಉರುಳಿಸಲು ಬಿಜೆಪಿ ನಾಯಕರು ಸಕಲ ರೀತಿಯಲ್ಲಿ ಪ್ರಯತ್ನಿಸುತ್ತಿದ್ದಾರೆ ಎಂದು ಬೆಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೃಷ್ಣಬೈರೇಗೌಡ ಆರೋಪಿಸಿದರು.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬಾಗಲಗುಂಟೆಯಲ್ಲಿ ಇಂದು ಪ್ರಚಾರ ನಡೆಸಿದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ರೈತರು, ಬಡವರಿಗೆ ಅನುಕೂಲವಾಗುವಂತಹ ಹತ್ತಾರು ಕಾರ್ಯಕ್ರಮಗಳನ್ನು ರೂಪಿಸುವುದರ ಮೂಲಕ ಜನಪರ ಸರ್ಕಾರವಾಗಿ ಕಾರ್ಯ ನಿರ್ವಹಿಸುತ್ತಿದೆ. ಆದರೆ, ಇದನ್ನು ಸಹಿಸದ ಬಿಜೆಪಿಯವರು ಸರ್ಕಾರ ರಚನೆಯಾದ ದಿನದಿಂದ ಹಿಡಿದು ಇಂದಿನವರೆಗೂ ನಿರಂತರವಾಗಿ ಸರ್ಕಾರ ಉರುಳಿಸಲು ನಾನಾ ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದರು.

ನಮ್ಮ ಸರ್ಕಾರ ಮಾಡಿರುವ ತಪ್ಪಾದರೂ ಏನು? ಬಡವರ, ರೈತರ ಪರ ಕೆಲಸ ಮಾಡುತ್ತಿರುವುದೇ ತಪ್ಪಾ? ನಮ್ಮ ರಾಜ್ಯ ಸರ್ಕಾರ 45 ಸಾವಿರ ಕೋಟಿ ರೂ.ನಷ್ಟು ರೈತರ ಸಾಲ ಮನ್ನಾ ಮಾಡಿದೆ. ಇದನ್ನು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಅಶಿಸ್ತು ಎಂದು ಹೇಳಿಕೊಳ್ಳುತ್ತದೆ. ಆದರೆ, ಕೇಂದ್ರ ಸರ್ಕಾರ ಉದ್ಯಮಿಗಳ 3.5ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದೆ. ಇದು ಯಾವ ಶಿಸ್ತನ್ನು ಹೇಳುತ್ತದೆ ಎಂದು ಜನರೇ ನಿರ್ಧರಿಸಬೇಕಿದೆ ಎಂದು ಬೈರೇಗೌಡ ಹೇಳಿದರು.

ಬಿಜೆಪಿ ಸರ್ಕಾರ ಕೇವಲ ಶ್ರೀಮಂತರು, ಉದ್ಯಮಿಗಳ ಪರ ಸರ್ಕಾರವಾಗಿ ಕಾರ್ಯನಿರ್ವಹಿಸುತ್ತಿದೆಯೇ ಹೊರತು, ಬಡವರ ಪರವಾಗಿ ಅಲ್ಲ. ಮೈತ್ರಿ ಸರ್ಕಾರದ ಶಾಸಕರನ್ನು ಸೆಳೆಯಲು ಬಿಜೆಪಿ ನಾಯಕರು 30-40 ಕೋಟಿ ರೂ. ಆಮಿಷ ಒಡ್ಡುತ್ತಿದ್ದಾರೆ. ಈ ಮೂಲಕ ಶ್ರೀಮಂತರಿಗಾಗಿ ಸರ್ಕಾರ ರಚಿಸಲು ಪ್ರಯತ್ನ ಮಾಡುತ್ತಿದ್ದಾರೆ. ಮತದಾರರು ಇವೆಲ್ಲವನ್ನೂ ವಿವೇಚನೆಯಿಂದ ಗಮನಿಸಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕು ಎಂದು ಅವರು ಕರೆ ನೀಡಿದರು.

ABOUT THE AUTHOR

...view details