ಬೆಂಗಳೂರು:ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿ ಫಾರಂ ಇಲ್ಲದೆ ನಾಮಪತ್ರ ಸಲ್ಲಿಸಿರುವ ಪಕ್ಷದ ಬಂಡಾಯ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯದಿದ್ದರೆ ಉಚ್ಚಾಟನೆ ಶಿಕ್ಷೆ ಎದುರಿಸಬೇಕಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ.
ದಾವಣಗೆರೆ ಪಾಲಿಕೆ ಚುನಾವಣೆ: ರೆಬೆಲ್ಗಳಿಗೆ ಈಶ್ವರಪ್ಪ ಖಡಕ್ ಎಚ್ಚರಿಕೆ..! - ದಾವಣಗೆರೆ ಪಾಲಿಕೆ ಚುನಾವಣೆಯ ಸುದ್ದಿ
ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಪಕ್ಷದಿಂದ ಅಧಿಕೃತವಾಗಿ ‘ಬಿ’ ಫಾರಂ ಪಡೆದು ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಬಿಜೆಪಿ ನಾಮಪತ್ರ ಸಲ್ಲಿಸಿರುವ ಇತರೆ ಅಭ್ಯರ್ಥಿಗಳು ಈ ಕೂಡಲೇ ತಮ್ಮ ನಾಮಪತ್ರಗಳನ್ನು ಹಿಂಪಡೆಯಬೇಕೆಂದು ಈ ಮೂಲಕ ಸೂಚಿಸಲಾಗುತ್ತಿದೆ.
ಈಶ್ವರಪ್ಪ
ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಪಕ್ಷದಿಂದ ಅಧಿಕೃತವಾಗಿ ‘ಬಿ’ ಫಾರಂ ಪಡೆದು ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳನ್ನು
ಹೊರತುಪಡಿಸಿ ಬಿಜೆಪಿ ನಾಮಪತ್ರ ಸಲ್ಲಿಸಿರುವ ಇತರೆ ಅಭ್ಯರ್ಥಿಗಳು ಈ ಕೂಡಲೇ ತಮ್ಮ ನಾಮಪತ್ರಗಳನ್ನು ಹಿಂಪಡೆಯಬೇಕೆಂದು ಈ ಮೂಲಕ ಸೂಚಿಸಲಾಗುತ್ತಿದೆ.
ಈ ಕೂಡಲೇ ತಮ್ಮ ನಾಮಪತ್ರವನ್ನು ಹಿಂಪಡೆಯದಿದ್ದರೆ ಅಂಥವರನ್ನು ಪಕ್ಷದಿಂದ ಉಚ್ಚಾಟಿಸಲಾಗುವುದೆಂದು ಪತ್ರಿಕಾ ಪ್ರಕಟಣೆ ಮೂಲಕ ಖಡಕ್ಕಾಗಿ ಸಂದೇಶ ರವಾನಿಸಲಾಗಿದೆ.