ಕರ್ನಾಟಕ

karnataka

ETV Bharat / state

ಪರೀಕ್ಷೆ ನಡೆಸಲು ಮುಂದಾದ ಕಾನೂನು ವಿವಿ: ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿ - High Court

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ 3ನೇ ಸೆಮಿಸ್ಟರ್ ಓದುತ್ತಿರುವ ವಿದ್ಯಾರ್ಥಿ ಪುರ್ಬಯಾನ್ ಚಕ್ರಬರ್ತಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದು, ಮಧ್ಯಂತರ ಸೆಮಿಸ್ಟರ್​ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳನ್ನು ಆಂತರಿಕ ಮೌಲ್ಯಮಾಪನ ಹಾಗೂ ಹಿಂದಿನ ವರ್ಷ ಪಡೆದಿರುವ ಅಂಕಗಳ ಆಧಾರದ ಮೇಲೆ ಮುಂದಿನ ಸೆಮಿಸ್ಟರ್​ಗೆ ಬಡ್ತಿ ನೀಡಿ ಪಾಸ್​ ಮಾಡಬೇಕು ಎಂದು ಕೋರಿದ್ದಾರೆ.

ಹೈಕೋರ್ಟ್
ಹೈಕೋರ್ಟ್

By

Published : Aug 12, 2020, 11:26 PM IST

ಬೆಂಗಳೂರು:ಮಧ್ಯಂತರ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಮುಂದಾಗಿರುವ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕ್ರಮ ಪ್ರಶ್ನಿಸಿ ವಿದ್ಯಾರ್ಥಿಯೊಬ್ಬರು ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ವಿವಿಯಲ್ಲಿ 3ನೇ ಸೆಮಿಸ್ಟರ್ ಓದುತ್ತಿರುವ ವಿದ್ಯಾರ್ಥಿ ಪುರ್ಬಯಾನ್ ಚಕ್ರಬರ್ತಿ, ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದು, ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ನಿರ್ದೇಶನದಂತೆ ಮಧ್ಯಂತರ ಸೆಮಿಸ್ಟರ್​ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳನ್ನು ಆಂತರಿಕ ಮೌಲ್ಯಮಾಪನ ಹಾಗೂ ಹಿಂದಿನ ವರ್ಷ ಪಡೆದಿರುವ ಅಂಕಗಳ ಆಧಾರದ ಮೇಲೆ ಮುಂದಿನ ಸೆಮಿಸ್ಟರ್​ಗೆ ಬಡ್ತಿ ನೀಡಿ ಪಾಸ್​ ಮಾಡಬೇಕು ಎಂದು ಕೋರಿದ್ದಾರೆ.

ವಿವಿಯ ಕ್ರಮದಿಂದಾಗಿ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗಲಿದೆ. ಕೊರೊನಾ ಸೋಂಕು ವ್ಯಾಪಿಸಿದಂತೆ ಲಾಕ್​ಡೌನ್ ಜಾರಿ ಮಾಡಿದ ಬಳಿಕ ಬಹುತೇಕ ವಿದ್ಯಾರ್ಥಿಗಳು ತಮ್ಮ ಸ್ವಗ್ರಾಮಗಳಿಗೆ ತೆರಳಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಆನ್​ಲೈನ್ ತರಗತಿಗಳಲ್ಲಿ ಭಾಗಿಯಾಗಲು ಸಾಧ್ಯವಾಗಿಲ್ಲ. ಜತೆಗೆ ಇಂಟರ್ ನೆಟ್, ಮೊಬೈಲ್, ಲ್ಯಾಪ್ ಟಾಪ್​ಗಳ ಕೊರತೆಯಿಂದಾಗಿಯೂ ಕೆಲವರಿಗೆ ಪಾಠ ಕೇಳಲು ಸಾಧ್ಯವಾಗಿಲ್ಲ.

ಈಗಾಗಲೇ ಶೈಕ್ಷಣಿಕ ವರ್ಷ ವಿಳಂಬವಾಗಿದೆ. ಕಾಲೇಜುಗಳು ಆರಂಭವಾಗಲು ಇನ್ನೂ 2-3 ತಿಂಗಳು ಬೇಕಾಗಲಿದೆ. ಇಂತಹ ಸಂದರ್ಭದಲ್ಲಿ ಮತ್ತೆ ಹಿಂದಿನ ಸೆಮಿಸ್ಟರ್ ಪರೀಕ್ಷೆಗಳಿಗೆ ಸಿದ್ದತೆ ಮಾಡಿಕೊಳ್ಳಲು ಹೋದರೆ ಪ್ರಸಕ್ತ ಶೈಕ್ಷಣಿಕ ವರ್ಷ ಹಾಳಾಗುತ್ತದೆ. ಹೀಗಾಗಿ ಯುಜಿಜಿ ನಿರ್ದೇಶನದಂತೆ ಮಧ್ಯಂತರ ಸೆಮಿಸ್ಟರ್​ಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳನ್ನು ಪಾಸ್​ ಮಾಡಬೇಕು ಎಂದು ಅರ್ಜಿದಾರ ವಿದ್ಯಾರ್ಥಿ ಮನವಿ ಮಾಡಿದ್ದಾರೆ.

ABOUT THE AUTHOR

...view details