ಕರ್ನಾಟಕ

karnataka

ETV Bharat / state

ಕೆಎಸ್‌ಪಿಸಿಬಿ ಅಧ್ಯಕ್ಷ ಸ್ಥಾನ ಬದಲಾವಣೆ ಆದೇಶ ಅಮಾನತ್ತಿನಲ್ಲಿಟ್ಟರುವ ಹೈಕೋರ್ಟ್

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸ್ಥಾನದ ವಿಚಾರಣೆಯನ್ನು ಹೈಕೋರ್ಟ್ ಮುಂದಿನ ವಿಚಾರಣೆಯವರೆಗೂ ಅಮಾನತ್ತಿನಲ್ಲಿಟ್ಟಿದೆ.

ಹೈಕೋರ್ಟ್
ಹೈಕೋರ್ಟ್

By ETV Bharat Karnataka Team

Published : Sep 2, 2023, 8:44 AM IST

ಬೆಂಗಳೂರು:ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷ ಸ್ಥಾನದಿಂದ ಶಾಂತ್ ಎ. ತಿಮ್ಮಯ್ಯ ಅವರನ್ನು ಬದಲಿಸುವ ಕುರಿತಂತೆ ಸರ್ಕಾರ ಹೊರಡಿಸಿದ್ದ ತಿದ್ದುಪಡಿ ಆದೇಶವನ್ನು ಹೈಕೋರ್ಟ್ ಮುಂದಿನ ವಿಚಾರಣೆಯವರೆಗೂ ಅಮಾನತ್ತಿನಲ್ಲಿಟ್ಟಿದೆ. ಕೆಎಸ್‌ಪಿಸಿಬಿ ಅಧ್ಯಕ್ಷ ಸ್ಥಾನದಿಂದ ತಮ್ಮ ಅಧಿಕಾರವಧಿ ಮೊಟಕುಗೊಳಿಸಿದ್ದ ಕ್ರಮವನ್ನು ಪ್ರಶ್ನಿಸಿ ಹಾಲಿ ಅಧ್ಯಕ್ಷ ಶಾಂತ್.ಎ. ತಿಮ್ಮಯ್ಯ ಸಲ್ಲಿಸಿರುವ ತಕರಾರು ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ಈ ಮಧ್ಯಂತರ ಆದೇಶ ಮಾಡಿ ವಿಚಾರಣೆಯನ್ನು ಸೆ.7ಕ್ಕೆ ಮುಂದೂಡಿದೆ. ಪ್ರಕರಣದಲ್ಲಿ ರಾಜ್ಯ ಸರ್ಕಾರದ ಕೈಗೊಂಡಿರುವ ಕ್ರಮವನ್ನು ಬೆಂಬಲಿಸಿದ ಅಡ್ವೋಕೇಟ್​ ಜನರಲ್ ಅವರು ಅರ್ಜಿ ಕುರಿತಂತೆ ಹೆಚ್ಚಿನ ವಿಚಾರಣೆ ನಡೆಯಬೇಕಿದೆ ಎಂದು ತಿಳಿಸಿದ್ದಾರೆ. ಆದರೆ, ಕಾಲಾವಕಾಶದ ಕೊರತೆ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಸೆ.7ಕ್ಕೆ ಮುಂದೂಡಲಾಗಿದೆ. ಆದ್ದರಿಂದ ಅರ್ಜಿಯ ಮುಂದಿನ ವಿಚಾರಣೆವರೆಗೆ ಕೆಎಸ್‌ಪಿಸಿಬಿ ಅಧ್ಯಕ್ಷರನ್ನು ಬದಲಿಸಬಾರದು ಎಂಬ ಆದೇಶವಿದೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಶಾಂತ್ ಎ.ತಿಮ್ಮಯ್ಯ ಅವರ ಅವಧಿ ಮುಗಿದಿದೆ. ಹಾಗಾಗಿ, ಅವರ ಸ್ಥಾನಕ್ಕೆ ಹೊಸದಾಗಿ ನೇಮಕಾತಿ ನಡೆಸಬೇಕಿದೆ. ನೇಮಕಾತಿ ನಡೆಯುವರೆಗೂ ರಾಜ್ಯ ಅರಣ್ಯ ಮತ್ತು ಪರಿಸರ ಇಲಾಖೆ ಕಾರ್ಯದರ್ಶಿಯನ್ನು ಕೆಎಸ್‌ಪಿಸಿಬಿ ಅಧ್ಯಕ್ಷರಾಗಿ ಹೆಚ್ಚುವರಿ ಜವಾಬ್ದಾರಿ ಹೊರಿಸಲಾಗಿದೆ ಎಂದು ತಿಳಿಸಿ ಸರ್ಕಾರ ಗುರುವಾರ ಅಧಿಸೂಚನೆ ಹೊರಡಿಸಿತ್ತು. ಈ ಹಿಂದೆ ಅಧ್ಯಕ್ಷರಾಗಿದ್ದ ಜಯರಾಂ ಅವರು ರಾಜೀನಾಮೆ ನೀಡಿದ್ದರು. ಅವರ ಸ್ಥಾನ ಮುಂದುವರೆದು ಶಾಂತ ತಿಮ್ಮಯ್ಯ ನೇಮಕ ಮಾಡಲಾಗಿತ್ತು ಎಂದು ಸರ್ಕಾರ ತಿಳಿಸಿತ್ತು.
ಅದನ್ನು ಪ್ರಶ್ನಿಸಿ ಶಾಂತ್ ಎ.ತಿಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಸಂಸದ ಸ್ಥಾನದಿಂದ ಪ್ರಜ್ವಲ್​ ರೇವಣ್ಣನನ್ನು ಅನರ್ಹಗೊಳಿಸಿದ ಹೈಕೋರ್ಟ್​:ಹೆಚ್​.ಡಿ. ರೇವಣ್ಣ ಅವರ ಪುತ್ರ ಪ್ರಜ್ವಲ್​ ರೇವಣ್ಣ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪ ಸಾಬೀತಾದ ಹಿನ್ನೆಲೆ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. 2019 ರಲ್ಲಿ ನಡೆದ ಲೋಕಸಭೆ ಚುನಾವಣೆಯ ವೇಳೆ ಪ್ರಜ್ವಲ್​ ರೇವಣ್ಣ ಚುನಾವಣಾ ಆಯೋಗಕ್ಕೆ ನಾಮಪತ್ರ ಸಲ್ಲಿಸುವಾಗ ಪೂರ್ಣ ಪ್ರಮಾಣದ ಆಸ್ತಿ ವಿವರ ಘೋಷಿಸಿರಲಿಲ್ಲ ಎಂದು ಆಗಿನ ಬಿಜೆಪಿ ಪಕ್ಷದ ಪರಾಜಿತ ಅಭ್ಯರ್ಥಿ ಎ. ಮಂಜು ಹಾಗೂ ಉಳಿದವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆಯನ್ನು ನಡೆಸಿದ ನ್ಯಾಯಲಯ ಆರೋಪ ಸಾಬೀತಾಗಿರುವುದರಿಂದ ಈ ತೀರ್ಪು ನೀಡಿದೆ.

ಇದನ್ನೂ ಓದಿ:'ವಕೀಲರೊಂದಿಗೆ ಚರ್ಚಿಸಿ ಮುಂದಿನ ಕಾನೂನು ಹೋರಾಟದ ಬಗ್ಗೆ ತೀರ್ಮಾನ': ಪ್ರಜ್ವಲ್ ರೇವಣ್ಣ

ABOUT THE AUTHOR

...view details