ದೇವನಹಳ್ಳಿ(ಬೆಂ.ಗ್ರಾಮಾಂತರ):ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ನೂತನ ಬಸ್ ನಿಲ್ದಾಣವನ್ನು ಇಂದು ಉದ್ಘಾಟಿಸಲಾಯಿತು.
ಸಾರಿಗೆ ಇಲಾಖೆಯ ವತಿಯಿಂದ ಸಾರ್ವಜನಿಕರ ಪ್ರಯಾಣಕ್ಕಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾದ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ನೂತನ ಬಸ್ ನಿಲ್ದಾಣವನ್ನು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಹಾಗೂ ಆಹಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಉದ್ಘಾಟಿಸಿ, ಬಸ್ಗಳಿಗೆ ಹಸಿರು ನಿಶಾನೆ ತೋರಿದರು.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಎಲ್ಲಾ ಸೌಲಭ್ಯಗಳನ್ನು ಹೊಂದಿದ್ದು, ಇದು ಎಲ್ಲಾ ವಿಮಾನ ನಿಲ್ದಾಣಗಳಿಗಿಂತ ವಿಭಿನ್ನವಾಗಿದೆ. ಅತಿ ದೊಡ್ದ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ. ವಿಮಾನ ನಿಲ್ದಾಣದಿಂದ ಬೆಂಗಳೂರು ನಗರಕ್ಕೆ ಸಂಚಾರ ಮಾಡಲು ಬಿಎಂಟಿಸಿ ಮತ್ತು ವಾಯುವಜ್ರದ ಎಲೆಕ್ಟ್ರಿಕ್ ಬಸ್ಗಳ ಸೇವೆಯನ್ನು ಕಲ್ಪಿಸಲಾಗಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬಸ್ಗಳನ್ನು ನೀಡಲು ಸಚಿವರು ಒಪ್ಪಿಗೆ ನೀಡಿದ್ದಾರೆ.