ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಒಂದೆಡೆಯಾದ್ರೆ ಮತ್ತೊಂದೆಡೆ ಹಂತ ಹಂತವಾಗಿ ಬಸ್ ಸಂಚಾರ ಆರಂಭಾವಾಗಿದೆ.
ಮೆಜೆಸ್ಟಿಕ್ನಲ್ಲಿ ಪೊಲೀಸ್ ಬಿಗಿ ಭದ್ರತೆಯೊಂದಿಗೆ ಬಸ್ ಸಂಚಾರ ಪುನಾರಂಭ - ಬಸ್ ಸಂಚಾರ ಆರಂಭ
ಸಿಲಿಕಾನ್ ಸಿಟಿಯ ಪ್ರಮುಖ ಸ್ಥಳವಾದ ಮೆಜೆಸ್ಟಿಕ್ನಲ್ಲಿ ಪೊಲೀಸ್ ಬಿಗಿ ಭದ್ರತೆಯೊಂದಿಗೆ ಬಸ್ ಸಂಚಾರ ಆರಂಭಿಸಲಾಗಿದೆ. ಕನ್ನಡ ಪರ ಸಂಘಟನೆಯ ಶಿವಕುಮಾರ್ ಬಸ್ ಸಂಚಾರ ಪ್ರಾರಂಭಿಸಿದ್ದರ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಕಂಡೆಕ್ಟರ್ ಮತ್ತು ಡ್ರೈವರ್ಗಳಿಗೆ ಹೂ ನೀಡಿ ಸ್ವಾಗತ ಕೋರಿದ್ದಾರೆ..

ಸಿಲಿಕಾನ್ ಸಿಟಿಯ ಪ್ರಮುಖ ಸ್ಥಳವಾದ ಮೆಜೆಸ್ಟಿಕ್ನಲ್ಲಿ ಪೊಲೀಸ್ ಬಿಗಿ ಭದ್ರತೆಯೊಂದಿಗೆ ಬಸ್ ಸಂಚಾರ ಆರಂಭಿಸಲಾಗಿದೆ. ಕನ್ನಡ ಪರ ಸಂಘಟನೆಯ ಶಿವಕುಮಾರ್ ಬಸ್ ಸಂಚಾರ ಪ್ರಾರಂಭಿಸಿದ್ದರ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಕಂಡೆಕ್ಟರ್ ಮತ್ತು ಡ್ರೈವರ್ಗಳಿಗೆ ಹೂ ನೀಡಿ ಸ್ವಾಗತ ಕೋರಿದ್ದಾರೆ.
ಮೆಜೆಸ್ಟಿಕ್ನಿಂದ ನಗರದ ಪ್ರಮುಖ ಸ್ಥಳಗಳಿಗೆ ಬಸ್ ಸಂಚಾರ ಆರಂಭವಾಗಿದೆ. ಹಾಗೆ ಕೆಲ ಬಸ್ಗಳಲ್ಲಿ ಪ್ರಯಾಣಿಕರು ಕೂಡ ಆಗಮಿಸಿದ್ರು. ಇನ್ನೇನು ಕೆಲವೇ ಕ್ಷಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಸ್ ಸಂಚಾರ ಪ್ರಾರಂಭವಾಗುವ ಸಾಧ್ಯತೆ ಇದೆ. ಯಾವುದೇ ರೀತಿಯಾದ ಅಹಿತಕರ ಘಟನೆಗಳು ನಡೆಯದ ಹಾಗೆ ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ಅವರ ನೇತೃತ್ವದಲ್ಲಿ ಮೆಜೆಸ್ಟಿಕ್ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.