ಬೆಂಗಳೂರು:ವಿದ್ಯಾರ್ಥಿಗಳ ಉಚಿತ/ರಿಯಾಯಿತಿ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿ ಕೆಎಸ್ಆರ್ಟಿಸಿ ಆದೇಶ ಹೊರಡಿಸಿದೆ. 2021-22ನೇ ಸಾಲಿನಲ್ಲಿ ಪದವಿ, ವೃತ್ತಿಪರ ಕೋರ್ಸ್, ಕಾನೂನು ಹಾಗೂ ಸ್ನಾತಕೋತ್ತರ ಪದವಿಯ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವರ್ಷದ ನವೆಂಬರ್ವರೆಗೂ ತರಗತಿಗಳು ಹಾಗೂ ಪರೀಕ್ಷೆಗಳು ನಡೆಯುವುದರಿಂದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅವಧಿಯನ್ನು ವಿಸ್ತರಿಸಲು ನಿರ್ಧರಿಸಿದೆ.
ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಿದ ಕೆಎಸ್ಆರ್ಟಿಸಿ
ಪದವಿ, ವೃತ್ತಿಪರ ಕೋರ್ಸ್, ಕಾನೂನು ಹಾಗೂ ಸ್ನಾತಕೋತ್ತರ ಪದವಿಯ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ವಿಸ್ತರಿಸಲು ಕೆಎಸ್ಆರ್ಟಿಸಿ ನಿರ್ಧರಿಸಿದೆ.
ಈ ನಿಟ್ಟಿನಲ್ಲಿ ಎಲ್ಲಾ ವರ್ಗದ ಪದವಿ, ವೃತ್ತಿಪರ ಕೋರ್ಸ್, ಕಾನೂನು ಹಾಗೂ ಸ್ನಾತಕೋತ್ತರ ಅಂತಿಮ ವರ್ಷದ ಪರೀಕ್ಷೆಗಳು/ತರಗತಿಗಳು ನಡೆಯುತ್ತಿದ್ದಲ್ಲಿ ಅದನ್ನು ಖಾತರಿಪಡಿಸಿಕೊಂಡು, ಒಂದು ಅಥವಾ ಎರಡು ತಿಂಗಳ ಅವಧಿಗೆ (ಜುಲೈ 2022/ ಆಗಸ್ಟ್ 2022) ನಿಗದಿತ ಮೊತ್ತವನ್ನು ಪಾವತಿಸಿಕೊಂಡು ರಶೀದಿ ನೀಡಬೇಕು. ವಿದ್ಯಾರ್ಥಿಗಳು ಕಡ್ಡಾಯವಾಗಿ ರಶೀದಿ ಮತ್ತು ಹಳೆಯ ಪಾಸ್ ಎರಡನ್ನೂ ತೋರಿಸಿ ಪ್ರಯಾಣಿಸಬಹುದಾಗಿದೆ. ಈ ಬಗ್ಗೆ ಎಲ್ಲಾ ಚಾಲಕ / ನಿರ್ವಾಹಕ ಮತ್ತು ತನಿಖಾ ಸಿಬ್ಬಂದಿಗೆ ಅಗತ್ಯ ಮಾಹಿತಿ ನೀಡಿ, ದೂರುಗಳಿಗೆ ಅವಕಾಶ ನೀಡದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.
ಇದನ್ನೂ ಓದಿ:ನಗರದಲ್ಲಿ ಘರ್ಜಿಸಿದ ಜೆಸಿಬಿಗಳು : 100 ಕೋಟಿ ರೂಪಾಯಿ ಮೌಲ್ಯದ ಬಿಡಿಎ ಆಸ್ತಿ ವಶ