ಬೆಂಗಳೂರು:ತಾಂತ್ರಿಕ ಸಹಾಯಕ ಹುದ್ದೆಗಳ ದಾಖಲಾತಿ ಪರಿಶೀಲನೆಗೆ ಗೈರಾದ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಅಂತಿಮ ಅವಕಾಶ ನೀಡಿದೆ. ಜನವರಿ 3ರಂದು ದಾಖಲಾತಿಗಳೊಂದಿಗೆ ಹಾಜರಾಗುವಂತೆ ಸೂಚಿಸಿದೆ.
ಅರ್ಹ ಅಭ್ಯರ್ಥಿಗಳಿಗೆ ಮೂಲ ದಾಖಲಾತಿ ಹಾಗೂ ದೇಹದಾರ್ಢ್ಯತೆ ಪರಿಶೀಲಿಸಲು ಡಿಸೆಂಬರ್ 26ರಿಂದ 28ರವರೆಗೆ ಅವಕಾಶ ನೀಡಲಾಗಿತ್ತು. ಆದರೆ, ಕೆಲವು ಅಭ್ಯರ್ಥಿಗಳು ಗೈರು ಹಾಜರಾದ ಹಿನ್ನೆಲೆಯಲ್ಲಿ ಅಂತಿಮ ಅವಕಾಶವನ್ನು ಕಚೇರಿ ವೇಳೆಯಲ್ಲಿ ಶಾಂತಿನಗರದಲ್ಲಿರುವ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಅಭ್ಯರ್ಥಿಗಳು ನಿಗಮದ ಅಧಿಕೃತ ವೆಬ್-ಸೈಟ್ ಆದ ksrtcjobs.comರಲ್ಲಿ ಕರೆಪತ್ರ ಡೌನ್‌ಲೋಡ್ ಮಾಡಿಕೊಂಡು ಕರೆಪತ್ರದಲ್ಲಿ ನಮೂದಿಸಿರುವ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕದಂದು ತಪ್ಪದೇ ಹಾಜರಾಗಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರಾರಸಾ ನಿಗಮದ ಸಹಾಯವಾಣಿ ಸಂಖ್ಯೆ.080 22221321-321, 7760990061, 7760990044 & 7760981930ಗಳಿಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ತಿಳಿಸಿದೆ.
ವಿಶೇಷ ಸೂಚನೆ:ಅಭ್ಯರ್ಥಿಗಳಿಗೆ ವೈಯಕ್ತಿಕ ಸಂದರ್ಶನ ಹಾಗೂ ಸಂದರ್ಶನಕ್ಕೆ ಅಂಕಗಳು ಇರುವುದಿಲ್ಲ. ನಿಗದಿತ ವಿದ್ಯಾರ್ಹತೆಯಲ್ಲಿ ಗಳಿಸಿದ ಶೇಕಡಾವಾರು ಅಂಕ ಹಾಗೂ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಆಧರಿಸಿ ಮೆರಿಟ್/ಮೀಸಲಾತಿ ನಿಯಮಗಳ ಆಧಾರದ ಮೇಲೆ ನೇಮಕಾತಿ ಮಾಡುವುದರಿಂದ ಯಾವುದೇ ಶಿಫಾರಸು, ಪ್ರಭಾವ ಹಾಗೂ ಅಮಿಷ/ಅವ್ಯವಹಾರಗಳಿಗೆ ಒಳಗಾಗಬಾರದೆಂದು ಪ್ರಕಟಣೆ ಮೂಲಕ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:ಕೆಕೆಆರ್ಟಿಸಿ ಸಿಬ್ಬಂದಿಗೆ ₹1.20 ಕೋಟಿ ಮೊತ್ತದ ಅಪಘಾತ ಪರಿಹಾರ ವಿಮಾ ಯೋಜನೆ