ಕರ್ನಾಟಕ

karnataka

ETV Bharat / state

ಕೆಟಿಸಿಪಿ ಕಾಯ್ದೆ, ಕೆಎಂಸಿ ಕಾಯ್ದೆ ಉಲ್ಲಂಘನೆಯಾಗಿದೆ: ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್​ - Urban Development Minister Bhairati Basavaraj

ರಾಜ್ಯದಲ್ಲಿ ಹಲವಾರು ಪ್ರಕರಣಗಳಲ್ಲಿ ಕೆಟಿಸಿಪಿ ಕಾಯ್ದೆ/ ಕೆಎಂಸಿ ಕಾಯ್ದೆ ಉಲ್ಲಂಘಿಸಿ ಅನಧಿಕೃತ ಕಟ್ಟಡ, ಬಡಾವಣೆ ನಿರ್ಮಿಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್​ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

sddd
ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್​

By

Published : Mar 18, 2020, 12:04 PM IST

ಬೆಂಗಳೂರು: ರಾಜ್ಯದಲ್ಲಿ ಹಲವಾರು ಪ್ರಕರಣಗಳಲ್ಲಿ ಕೆಟಿಸಿಪಿ ಕಾಯ್ದೆ/ ಕೆಎಂಸಿ ಕಾಯ್ದೆ ಉಲ್ಲಂಘಿಸಿ ಅನಧಿಕೃತ ಕಟ್ಟಡ, ಬಡಾವಣೆ ನಿರ್ಮಿಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್​ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಆಡಳಿತ ಪಕ್ಷದ ಶಾಸಕರಾದ ಎಚ್.ಹಾಲಪ್ಪ, ಸಿದ್ದು ಸವದಿ ಸೇರಿ ಇತರ ಶಾಸಕರು ನಿಯಮ 69ರಡಿ ಮಾಡಿದ ಪ್ರಸ್ತಾಪಕ್ಕೆ ಸಚಿವರು ಉತ್ತರಿಸಿದ‌ರು. ಕಳೆದ 2014ರಲ್ಲಿ ಅನಧಿಕೃತ ನಿರ್ಮಾಣಗಳನ್ನು ಸಕ್ರಮಗೊಳಿಸಲು ನಿಯಮ ರೂಪಿಸಲಾಗಿದೆ. ಆಯಾ ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಯೋಜನಾ ಪ್ರಾಧಿಕಾರ, ಸ್ಥಳೀಯ ಸಂಸ್ಥೆಗಳು ಸಕ್ರಮಗೊಳಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಈ ನಿಯಮಗಳಿಗೆ ಸರ್ವೋಚ್ಛ ನ್ಯಾಯಾಲಯ ಮಧ್ಯಂತರ ಆದೇಶದಲ್ಲಿ ತಡೆಯಾಜ್ಞೆ ನೀಡಿದೆ. ಈ ಸಂಬಂಧ ರಾಜ್ಯದ ಅಡ್ವೋಕೇಟ್ ಜನರಲ್ ಹಾಗೂ ಸಿಎಂ ಜೊತೆ ಸಮಾಲೋಚಿಸಿ ಸರಿಪಡಿಸುವ ಭರವಸೆ ನೀಡಿದರು.

ABOUT THE AUTHOR

...view details