ಕರ್ನಾಟಕ

karnataka

ETV Bharat / state

ಕುತೂಹಲ ಕೆರಳಿಸಿದ ಪ್ರಜ್ವಲ್​ ನಡೆ... ದೇವೇಗೌಡರೊಂದಿಗೆ ಸಿಎಂ, ರೇವಣ್ಣ ಮಹತ್ವದ ಚರ್ಚೆ - Revanna

ಮೊಮ್ಮಗನಿಗಾಗಿ ಹಾಸನ ಬಿಟ್ಟುಕೊಟ್ಟಿದ್ದ ಮಾಜಿ ಪ್ರಧಾನಿ ದೇವೇಗೌಡರಿಗೆ ಸೋಲು- ತಾತನಿಗೆ ಮತ್ತೆ ಶಕ್ತಿ ತುಂಬಲು ರಾಜೀನಾಮೆಗೆ ಸಿದ್ಧವಾದ್ರು ಪಜ್ವಲ್​ ರೇವಣ್ಣ- ಪಕ್ಷದ ವರಿಷ್ಠರನ್ನು ಭೇಟಿಯಾದ್ರು ಸಿಎಂ ಕುಮಾರಸ್ವಾಮಿ, ಸಚಿವ ರೇವಣ್ಣ- ಕುತೂಹಲ ಮೂಡಿಸಿದ ನಡೆ

ಸಂಗ್ರಹ ಚಿತ್ರ

By

Published : May 24, 2019, 1:26 PM IST

ಬೆಂಗಳೂರು:ಲೋಕಸಭೆ ಚುನಾವಣಾ ಫಲಿತಾಂಶದಲ್ಲಿ ಮೈತ್ರಿಕೂಟಕ್ಕೆ ಹಿನ್ನಡೆ ಉಂಟಾದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಜೊತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಹತ್ವದ ಮಾತುಕತೆ ನಡೆಸುತ್ತಿದ್ದಾರೆ.

ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಇಂದು ಭೇಟಿ ನೀಡಿರುವ ಕುಮಾರಸ್ವಾಮಿ ಅವರು, ದೇವೇಗೌಡರೊಂದಿಗೆ ಒಂದು ಸುದೀರ್ಘ ಚರ್ಚೆಯಲ್ಲಿ ಭಾಗಿಯಾಗಿದ್ದಾರೆ.

ಇದನ್ನು ಓದಿ ತಾತನಿಗೆ ಕ್ಷೇತ್ರ ತ್ಯಾಗ ಮಾಡುವ ನಿರ್ಧಾರ ಪ್ರಕಟಿಸಿದ ಮೊಮ್ಮಗ

ಸಿಎಂ ಜೊತೆ ಸಚಿವ ಹೆಚ್.ಡಿ. ರೇವಣ್ಣ ಸಹ ಚರ್ಚೆಯಲ್ಲಿ ಭಾಗವಹಿಸಿದ್ದಾರೆ. ತುಮಕೂರು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ದೇವೇಗೌಡರು ಪರಾಭವಗೊಂಡಿದ್ದಾರೆ. ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಜಯಗಳಿಸಿದ್ದು, ಇದೀಗ ತಮ್ಮ ತಾತನಿಗಾಗಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಈ ಬೆಳವಣಿಗೆ ತೀವ್ರ ಕುತೂಹಲ ಮೂಡಿಸಿದ್ದು, ತಂದೆ ಜೊತೆ ಕುಮಾರಸ್ವಾಮಿ ಹಾಗೂ ರೇವಣ್ಣ ಈ ಕುರಿತು ಚರ್ಚೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನು ಓದಿಪ್ರಜ್ವಲ್ ರಾಜೀನಾಮೆ ಹೇಳಿಕೆ ಕೇವಲ ನಾಟಕ: ಬಿ ಜೆ ಪುಟ್ಟಸ್ವಾಮಿ

ಇದರ ಮಧ್ಯೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಇಂದು ಮಧ್ಯಾಹ್ನ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಅನೌಪಚಾರಿಕ ಸಭೆ ನಡೆಸಲಿದ್ದಾರೆ. ಸಚಿವ ಸಂಪುಟ ಸಭೆ ನಂತರ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಸಂಜೆ 4.30 ಕ್ಕೆ ನಡೆಯುವ ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಫಲಿತಾಂಶದಿಂದ ಸರ್ಕಾರದ ಮೇಲೆ ಆಗಬಹುದಾದ ಪರಿಣಾಮ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಲಾಗ್ತಿದೆ.

ABOUT THE AUTHOR

...view details