ಕರ್ನಾಟಕ

karnataka

ETV Bharat / state

ಬಿಜೆಪಿ ಸರ್ಕಾರಕ್ಕೆ ಸಿದ್ದು, ಹೆಚ್ಡಿಕೆ ಗುದ್ದು: ಬಿಎಸ್‌ವೈಗೆ ಸಲಹೆ ನೀಡಿದ ಮಾಜಿ ಸಿಎಂಗಳು - ಬಿಜೆಪಿ ಸರ್ಕಾರಕ್ಕೆ ಸಿದ್ದರಾಮಯ್ಯ, ಕುಮಾರಸ್ವಾಮಿ ಗುದ್ದು

ಕಾರಣಾಂತರದಿಂದ ಎರಡು ಬಾರಿ ಲೇಖಾನುದಾನ ಪಡೆಯಲಾಗಿದೆ. ಇನ್ನು ಮುಂದೆ ಇದಕ್ಕೆ ಅವಕಾಶ ನೀಡಬಾರದು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಎಲ್ಲಾ ಯೋಜನೆಗಳನ್ನು ಮುಂದುವರೆಸುವುದರ ಜೊತೆಗೆ ಅನುದಾನ ನೀಡಿಕೆಯಲ್ಲಿ ಉಂಟಾಗಿರುವ ತಾರತಮ್ಯ ಸರಿಪಡಿಸಬೇಕೆಂದು ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಆಗ್ರಹಿಸಿದ್ರು.

ಸಿಎಂಗೆ ಸಲಹೆ ನೀಡಿದ ಮಾಜಿ ಸಿಎಂಗಳು

By

Published : Oct 12, 2019, 4:46 PM IST

Updated : Oct 12, 2019, 5:39 PM IST

ಬೆಂಗಳೂರು: ಪದೇ ಪದೇ ಲೇಖಾನುದಾನ ಪಡೆಯುವ ಪ್ರವೃತ್ತಿಗೆ ವಿಶ್ರಾಂತಿ ಹೇಳಿ ಪೂರ್ಣಪ್ರಮಾಣದ ಬಜೆಟ್ ಅಂಗೀಕಾರ ಪಡೆಯಲು ನಿಯಾಮಾವಳಿ ಪ್ರಕಾರ ಚರ್ಚೆಗೆ ಅವಕಾಶ ನೀಡಬೇಕೆಂದು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಒತ್ತಾಯಿಸಿದರು.

2019-20ನೇ ಸಾಲಿನ ಆಯವ್ಯಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾರಣಾಂತರದಿಂದ ಎರಡು ಬಾರಿ ಲೇಖಾನುದಾನ ಪಡೆಯಲಾಗಿದೆ. ಇನ್ನು ಮುಂದೆ ಇದಕ್ಕೆ ಅವಕಾಶ ನೀಡಬಾರದು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಎಲ್ಲಾ ಯೋಜನೆಗಳನ್ನು ಮುಂದುವರೆಸುವುದರ ಜೊತೆಗೆ ಅನುದಾನ ನೀಡಿಕೆಯಲ್ಲಿ ಉಂಟಾಗಿರುವುವ ತಾರತಮ್ಯವನ್ನು ಸರಿಪಡಿಸಬೇಕೆಂದು ಆಗ್ರಹಿಸಿದರು.

ಬಿಜೆಪಿ ಸರ್ಕಾರಕ್ಕೆ ಸಿದ್ದು, ಹೆಚ್ಡಿಕೆ ಗುದ್ದು

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಮಾತನಾಡಿ, ತಮ್ಮ ಅಧಿಕಾರಾವಧಿಯಲ್ಲಿ ಎಲ್ಲಾ ಶಾಸಕರಿಗೆ ಬಿಡುಗಡೆ ಮಾಡಿರುವ ಅನುದಾನವನ್ನು ಪುನಃ ಪರಿಶೀಲಿಸಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ತಡೆ ಹಿಡಿದಿರುವ ಕಾಮಗಾರಿಗಳನ್ನು ಮುಂದುವರೆಸಲು ಸೂಚನೆ ನೀಡಬೇಕು. ಉಳಿದ 5 ತಿಂಗಳಲ್ಲಿ ರಾಜ್ಯದ ಅಭಿವೃದ್ಧಿಗೆ ಆಯವ್ಯಯದಲ್ಲಿ ನಿಗದಿ ಮಾಡಿರುವ ಹಣವನ್ನು ವೆಚ್ಚ ಮಾಡಬೇಕೆಂದು ಸಲಹೆ ನೀಡಿದರಲ್ಲದೆ, ಬೆಂಗಳೂರು ನಗರದ ಅಭಿವೃದ್ಧಿ ಕುರಿತಂತೆ ಕ್ಷೇತ್ರದ ಶಾಸಕರ ಸಭೆ ಕರೆದು, ಚರ್ಚಿಸಿ ಪರಿಹಾರ ಕಂಡುಹಿಡಿಯಬೇಕೆಂದು ಸಲಹೆ ನೀಡಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಮಧ್ಯ ಪ್ರವೇಶಿಸಿ ರಾಜ್ಯ ಸರ್ಕಾರ ಎಲ್ಲಾ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಲಿದೆ. ಕೆಲವೆಡೆ ಅನುದಾನದಲ್ಲಿ ತಾರತಮ್ಯವಾಗಿದೆ ಎಂಬ ಆಕ್ಷೇಪಗಳಿವೆ. ಅವುಗಳನ್ನು ಸರಿಪಡಿಸಲಾಗುವುದೆಂದು ಪ್ರತ್ಯುತ್ತರ ನೀಡಿದರು.

Last Updated : Oct 12, 2019, 5:39 PM IST

ABOUT THE AUTHOR

...view details