ಕರ್ನಾಟಕ

karnataka

ETV Bharat / state

’ಇದು ನಾಚಿಕೆಗೇಡಿನ ರಾಜಕೀಯ’... ಸಿಎಂ ವಿರುದ್ಧ ಮಾಜಿ ಸಿಎಂ ಟ್ವೀಟಾಸ್ತ್ರ - ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

ಸಿಎಂ ಬಿಎಸ್​​ವೈ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು, ಟ್ವಿಟರ್​ ವೇದಿಕೆಯನ್ನಾಗಿಸಿಕೊಂಡು ಬಿಎಸ್​​ವೈ ಆಡಳಿತದ ಕುರಿತು ಹರಿಹಾಯ್ದಿದ್ದಾರೆ.

ಸಿಎಂ ಟ್ವೀಟಾಸ್ತ್ರ

By

Published : Sep 20, 2019, 1:21 PM IST

ಬೆಂಗಳೂರು : ಆಪರೇಷನ್ ಕಮಲ ಕುಖ್ಯಾತಿಯ ಸಿಎಂ ಬಿ.ಎಸ್. ಯಡಿಯೂರಪ್ಪನವರು ಮತ್ತೊಂದು ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವಿಟ್ಟರ್​​ನಲ್ಲಿ ಟೀಕಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಬಹುಮತದ ಸರ್ಕಾರ ನಿಗದಿಪಡಿಸಿದ್ದ ಕ್ಷೇತ್ರಗಳ ಅಭಿವೃದ್ಧಿಯ ಅನುದಾನವನ್ನು ಕಡಿತ ಮಾಡಿ ತಮ್ಮ ' ಪಕ್ಷಪಾತಿ' ನಿಲುವನ್ನು ಪ್ರತಿಪಾದಿಸಿದ್ದಾರೆ. ಅಗತ್ಯವಿದ್ದರೆ ಮತ್ತಷ್ಟು ನೀಡಲಿ. ಕೊಟ್ಟದ್ದನ್ನು ಕಿತ್ತುಕೊಳ್ಳುವುದು ಯಾವ ನ್ಯಾಯ?. ಇದು 'ನಾಚಿಕೆಗೇಡಿನ ರಾಜಕೀಯ ' ಎಂದು ಕಿಡಿಕಾರಿದ್ದಾರೆ.

ನಿಮಗೆ ದ್ವೇಷ ಇದ್ದದ್ದು ನನ್ನ ಮೇಲಲ್ಲವೇ ಯಡಿಯೂರಪ್ಪನವರೇ? ಆದರೆ ಬಡವರ ಮೇಲೇಕೆ ನಿಮ್ಮ ಕೋಪ? ಸೇಡಿನ ರಾಜಕೀಯ ಮಾಡುವುದಿಲ್ಲ ಎಂದು ಸದನದಲ್ಲಿ ಹೇಳಿದ್ದ ನೀವು, ಅಧಿಕಾರ ವಹಿಸಿಕೊಂಡ ನಂತರ ನನ್ನ ಸರ್ಕಾರದ ಕಾರ್ಯಕ್ರಮಗಳ ವಿಷಯದಲ್ಲಿ ಮಾಡಿದ್ದೆಲ್ಲವೂ ಸೇಡಿನ ಕ್ರಮ. 'ಬಡವರ ಬಂಧು' ಯೋಜನೆಯನ್ನು ನಿರ್ಲಕ್ಷಿಸಿ ನೀವು ಬಡವರ ವಿರೋಧಿಯಾಗಿದ್ದೀರಿ. ಅಶಕ್ತರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ನೆರವಾಗುತ್ತಿದ್ದ 'ಬಡವರ ಬಂಧು' ಯೋಜನೆಯನ್ನು ಕೊಲ್ಲುತ್ತಿರುವ ನೀವು ( ಯಡಿಯೂರಪ್ಪ) ಬಡವರ ಸ್ವಾಭಿಮಾನವನ್ನು ಕೆಣಕಿದ್ದೀರಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.

' ಬಡವರ ಬಂಧು' ಯೋಜನೆ ವಿಫಲವಾಗಬಾರದು. ಇದರಲ್ಲಿ ಜಾತಿ, ಧರ್ಮ, ಪಕ್ಷಗಳಿಲ್ಲ. ಅಶಕ್ತರನ್ನು ಸಬಲರನ್ನಾಗಿಸಿ ದೇಶದ ಅಭಿವೃದ್ಧಿಯಲ್ಲಿ ಅವರನ್ನೂ ಒಳಗೊಳ್ಳುವಂತೆ ಮಾಡುವ ಪ್ರಮುಖ ಆರ್ಥಿಕ ಚಟುವಟಿಕೆ. ಈ ಕಾರ್ಯಕ್ರಮಕ್ಕೆ ಯಡಿಯೂರಪ್ಪನವರು ಚೈತನ್ಯ ತುಂಬಬೇಕು. ಇಲ್ಲವೇ, ಹೋರಾಟ ಎದುರಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ABOUT THE AUTHOR

...view details