ಕರ್ನಾಟಕ

karnataka

ETV Bharat / state

ನೂತನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಅಭಿನಂದನೆ ಸಲ್ಲಿಸಿದ ಕುಮಾರಸ್ವಾಮಿ - ಡಿಕೆ ಶಿವಕುಮಾರ್​ ಅಭಿನಂದನೆ ಸಲ್ಲಿಸಿದ ಕುಮಾರಸ್ವಾಮಿ

ಕೆಪಿಸಿಸಿ ನೂತನ ಸಾರಥಿಯಾಗಿ ಡಿಕೆಶಿವಕುಮಾರ್ ನೇಮಕಗೊಂಡಿದ್ದು, ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿಯವರು ಟ್ವೀಟ್​ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಕುಮಾರಸ್ವಾಮಿ
Kumaraswamy

By

Published : Mar 11, 2020, 7:54 PM IST

ಬೆಂಗಳೂರು:ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ನೇಮಕಗೊಂಡಿರುವ ಕಾಂಗ್ರೆಸ್​ ಹಿರಿಯ ಮುಖಂಡ, ಮಾಜಿ ಸಚಿವ ಡಿ.ಕೆ.ಶಿವಕುಮಾರ್​​ರವರಿಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೆಪಿಸಿಸಿಗೆ ಡಿ.ಕೆ.ಶಿವಕುಮಾರ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಟ್ವೀಟ್​ ಮಾಡುವ ಮೂಲಕ ತನ್ನ ಅಭಿನಂದನೆ ಸಲ್ಲಿಸಿದ್ದಾರೆ.

ಗೌರವ ನಮನ :

1960 ರ ದಶಕದಲ್ಲಿ ಬೆಂಗಳೂರಿನಲ್ಲಿ ಅನ್ಯಭಾಷಿಗರ ಪ್ರಾಬಲ್ಯದಿಂದ ಕನ್ನಡ ಅನಾಥ ಸ್ಥಿತಿಗೆ ತಲುಪಿತ್ತು. ಮತ್ತೆ ಕನ್ನಡಿಗರ ಸ್ವಾಭಿಮಾನವನ್ನು ಎತ್ತಿ ಹಿಡಿಯಲು ಕನ್ನಡ ಬಾವುಟವನ್ನು ರಚಿಸಿ ಕನ್ನಡ ಚಳವಳಿಗಳ ಮೂಲಕ ಅವಿರತ ಶ್ರಮಿಸಿದ ಕನ್ನಡದ ವೀರ ಸೇನಾನಿ ಮ. ರಾಮಮೂರ್ತಿಯವರ ಜನ್ಮದಿನವಾದ ಇಂದು ಅವರಿಗೂ ಗೌರವ ನಮನಗಳನ್ನು ಹೆಚ್ಡಿ​ಕೆ ಸಲ್ಲಿಸಿದ್ದಾರೆ.

ABOUT THE AUTHOR

...view details