ಬೆಂಗಳೂರು:ರಾಜ್ಯದಲ್ಲಿ ಮತ್ತೊಂದು ಸುತ್ತಿನ ರಾಜಕೀಯ ವಿಪ್ಲವ ಶುರುವಾಗಿದೆ. ಮೈತ್ರಿ ಸರ್ಕಾರದ ಕೆಲವು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಉಂಟಾಗಿರುವ ರಾಜಕೀಯ ತಲ್ಲಣ ತಣಿಸಲು ಉಭಯ ಪಕ್ಷಗಳ ವರಿಷ್ಠರು ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ.
ತೀವ್ರಗೊಂಡ ರಾಜಕೀಯ ಬಿಕ್ಕಟ್ಟನ್ನು ತಣಿಸಲು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಜೊತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾತುಕತೆ ನಡೆಸುತ್ತಿದ್ದಾರೆ. ಇಂದು ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಆಗಮಿಸಿರುವ ಸಿಎಂ, ದೇವೇಗೌಡರ ಜೊತೆ ಮುಂದಿನ ಹೆಜ್ಜೆ ಕುರಿತು ಗಹನವಾದ ಚರ್ಚೆಯಲ್ಲಿ ತೊಡಗಿದ್ದಾರೆ. ಇದೀಗ ಸಚಿವರಾದ ಹೆಚ್.ಡಿ. ರೇವಣ್ಣ, ಜಿ.ಟಿ. ದೇವೇಗೌಡ ಅವರು ಸಹ ಜೆಡಿಎಸ್ ವರಿಷ್ಠರ ನಿವಾಸಕ್ಕೆ ಆಗಮಿಸಿದ್ದು, ತಮ್ಮ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಕುರಿತು ಚರ್ಚೆ ನಡೆಸುತ್ತಿದ್ದಾರೆ.